Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮುಂಬರುವ ಟಾರ್ಗೆಟ್ ಎಂದು ಶರಣ್ ಪಂಪ್ವೆಲ್‌ ಭರತ್ ಕುಮ್ಡೇಲ್ ಗೆ ಬೆದರಿಕೆ: ಸುಮೊಟೋ ಪ್ರಕರಣ ದಾಖಲು

Spread the love

ಮಂಗಳೂರು: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು.

‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು. ಶರಣ್ ಪಂಪ್ವೆಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡು. ಬಿಎನ್​ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ‘‘ಅಶ್ರಫ್ ಕೊಂದ ಭರತ್​ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಇಂತಹ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಸಾಮಾಜಿಕ ಮಾಧ್ಯಮಗಳಾಗಿ ಹರಿದಾಡಿದ್ದವು.

ಗ್ರಾಮಾಂತರ ಠಾಣೆಯ ಸ್ಪೆಷಲ್‌ ಬ್ರ್ಯಾಂಚ್‌ನಲ್ಲಿ ಕರ್ತವ್ಯದಲ್ಲಿರುವ ಕೃಷ್ಣ ನಾಯ್ಕ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆನ್‌ ಫಿಕ್ಸ್‌ ಲೀಡರ್‌ ಎಂದು ಬರೆದಿರುವ ಇನ್‌ಸ್ಟಾಗ್ರಾಮ್‌ ಚಿಹ್ನೆ ಇರುವ ಪೋಸ್ಟ್‌ ಹರಿದಾಡುತ್ತಿದ್ದು, ಪೋಸ್ಟ್‌ ಮಾಡಿದ ಅಪರಿಚಿತ ವ್ಯಕ್ತಿಯು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿ ಹಿಂದೂ ಸಮುದಾಯದ ಸಂಘಟನೆಯ ವ್ಯಕ್ತಿಯನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾನೆ. ಇದು ಅವರ ಭಾವನೆಗಳಿಗೆ ಧಕ್ಕೆ ಮಾಡುವ ಜತೆಗೆ ಸಮಾಜದಲ್ಲಿ ಧರ್ಮಗಳ ಮಧ್ಯೆ ಕೋಮು ಭಾವನೆಗಳನ್ನು ಕೆರಳಿಸಿ ಅಶಾಂತಿ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಸಂದೇಶವನ್ನು ಸೃಷ್ಟಿಸಿ ರವಾನಿಸಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ರಿಯಾಜ್ ಕಡಂಬು ವಿರುದ್ಧ ಬೆದರಿಕೆ- ಪ್ರಕರಣ ದಾಖಲು: ಎಸ್​​ಡಿಪಿಐ ಮುಖಂಡ ರಿಯಾಜ್ ಕಡಂಬು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ. ಕೊಲೆ ಬೆದರಿಕೆ ಹಾಕಿದ ಕೆ.ಆರ್ ರಾಕೇಶ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಸುಹಾಸ್ ಶೆಟ್ಟಿ ಕೊಲೆ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ‘‘Next is Riyaz Kadanbu hit list’’ ಎಂದು @Krrakesh9456 ಖಾತೆ ಮೂಲಕ ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಜ್ ಕಡಂಬು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


Spread the love
Share:

administrator

Leave a Reply

Your email address will not be published. Required fields are marked *