ಶಿವಮೊಗ್ಗ: 6ನೇ ತರಗತಿ ಬಾಲಕಿ ಆತ್ಮಹ*ತ್ಯೆ; ರಜೆ ಇರುವುದರಿಂದ ಮನೆಯಲ್ಲೇ ಇದ್ದ 12 ವರ್ಷದ ಜೀವಿತಾ ನೇ*ಣಿಗೆ ಶರಣು

ಶಿವಮೊಗ್ಗ: 6ನೇ ಕ್ಲಾಸ್ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನ ಕಟ್ಟೆ ಬಡಾವಣೆಯ ಎ- ಬ್ಲಾಕ್ನಲ್ಲಿ ಯುವತಿ ತನ್ನ ಪೋಷಕರೊಂದಿಗೆ ವಾಸ ಮಾಡುತ್ತಿದ್ದಳು. ಆದರೆ ಈಗ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಅವಘಡ
ಜೀವಿತಾ ಸಾವನ್ನಪ್ಪಿದ ಬಾಲಕಿ, 12 ವರ್ಷದ ಜೀವಿತಾ ಬೊಮ್ಮನ ಕಟ್ಟೆಯ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇತ್ತೀಚೆಗೆ ಆಕೆಗೆ ಪರೀಕ್ಷೆ ಮುಗಿದು ರಜೆ ಇದ್ದ ಕಾರಣ ಮನೆಯಲ್ಲೇ ಒಬ್ಬಳೇ ಇದ್ದಳು. ಪೋಷಕರು ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ ಸಾವಿಗೆ ಶರಣಾಗಿದ್ದಾಳೆ ಸಂಜೆ ಪೋಷಕರು ಮನೆಗೆ ಮರಳಿದ ನಂತರವೇ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಟ್ಟ ಮಗಳ ಈ ಹಠಾತ್ ಸಾವಿನಿಂದ ಪೋಷಕರು ಕಂಗಾಲಾಗಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಮನವಿ:
ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ… ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ‘ಆತ್ಮ8ತ್ಯೆ’ ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:
Sahai Helpline – 080 2549 7777