ಶಿವಮೊಗ್ಗ: ಕಾರು-ಲಾರಿ ಮುಖಾಮುಖಿ ಢಿಕ್ಕಿ – ನಾಲ್ವರು ದುರ್ಮರಣ, ಓರ್ವರಿಗೆ ಗಂಭೀರ ಗಾಯ!”

ಶಿವಮೊಗ್ಗ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟು, ಓರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಶಿಕಾರಿಪುರ ತಾಲೂಕಿನ ತರಲಘಟ್ಟ ಕ್ಯಾಂಪ್ ನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಮುತ್ತಿಗೆ ಗ್ರಾಮದ ನಿವಾಸಿಗಳಾದ ಉಜ್ಜಪ್ಪ (65), ಅವರ ಪತ್ನಿ ಲಲಿತಮ್ಮ (60), ಇವರ ಸಂಬಂಧಿ ಜಯಮ್ಮ (58) ಹಾಗೂ ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನ ನಿವಾಸಿಯಾದ ಕಾರು ಚಾಲಕ ಗುರುಬಸಪ್ಪ(35) ಮೃತಪಟ್ಟವರೆಂದು ತಿಳಿದುಬಂದಿದೆ.
ಇದನ್ನೂ ಓದಿ Shivamogga | ಕೆಎಸ್ಒಯು ಪರೀಕ್ಷೆಯಲ್ಲಿ ನಕಲು ಆರೋಷ ಹಣ ಕೊಟ್ರೆ ಮೊಬೈಲ್, ಬುಕ್ ನೋಡಿ ಪರೀಕ್ಷೆ ಬರೆಯಬಹುದು
ಅವಘಡದಲ್ಲಿ ಹನುಮಂತಪ್ಪ (65) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಉಜ್ಜಪ್ಪ ಕಳೆದ ತಿಂಗಳು ಅಪಘಾತದಲ್ಲಿ ಗಾಯಗೊಂಡಿದ್ದು, ಅವರಿಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಬಾಡಿಗೆ ಕಾರಿನಲ್ಲಿ | ಕಾರಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರಿದ್ದ ಕಾರಿಗೆ ತರಲಘಟ್ಟ ಕ್ಯಾಂಪ್ ಬಳಿ ಶಿಕಾರಿಪುರದ ಕಡೆಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಅಡಿಕೆ ಸಾಗಾಟದ ಲಾರಿ ಢಿಕ್ಕಿಯಾಗಿದೆ.
ಈ ಬಗ್ಗೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
