ಆಹಾರ ಪ್ರಿಯರಿಗೆ ಶಾಕ್-ಇಡ್ಲಿಯಿಂದಲೂ ಬರುತ್ತದೆ ಕ್ಯಾನ್ಸರ್

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ಇಡ್ಲಿಯನ್ನ ಎಲ್ಲೆಡೆ ತಯಾರಿಸಲಾಗುತ್ತದೆ. ಬಹುತೇಕ ನಗರವಾಸಿಗಳಿಗೆ ಇಡ್ಲಿಯೇ ಬೆಳಗ್ಗಿನ ಉಪಾಹಾರ. ಆದ್ರೆ ಈ ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಖುದ್ದು ಆಹಾರ ಇಲಾಖೆಯ ವರದಿಯೇ ಬಹಿರಂಗಪಡಿಸಿರುವುದು ಜನರ ನಿದ್ದೆಗೆಡಿಸಿದೆ.
ಇಡ್ಲಿಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆನಡೆಸಿದ ಪರೀಕ್ಷೆಯಿಂದ ತಿಳಿದುಬಂದಿದೆ.
ಹೌದು. ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದಿದ್ದವು. ದೂರು ಬಂದ ಹಿನ್ನೆಲೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಸುಮಾರು 500 ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ 35 ಕಡೆ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಈ ಬೆನ್ನಲ್ಲೇ 35 ಮಳಿಗೆದಾರರಿಗೆ ನೋಟಿಸ್ ನೀಡಲಾಗಿತ್ತು.
ಅಲ್ಲದೇ 500 ಕಡೆಗಳಲ್ಲಿ ಕಡೆಗಳಲ್ಲಿ ಸಂಗ್ರಹಿಸಿದ್ದ ಮಾದರಿಗಳನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 35 ಡೇಂಜರ್ ಅಂತ ವರದಿ ಬಂದಿದೆ. ಇಡ್ಲಿಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಶಾಖ ಹೆಚ್ಚಾದಂತೆ ಪಿಎಫ್‌ಎಎಸ್ ಕೆಮಿಕಲ್ ಎಂಬ ಹಾನಿಕಾರಕ ಅಂಶ ಹೊರ ಸೂಸುತ್ತದೆ ಅಂತ ವರದಿ ಬಂದಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ.
ಈ ಹಿನ್ನೆಲೆ ಆಹಾರ ತಯಾರಿಕೆಗೆ ಬಳಸುವ ಈ ಪ್ಲಾಸ್ಟಿಕ್ ಬಳಕೆಯನ್ನ ನಿಷೇಧ ಮಾಡೋದಕ್ಕೆ ಇಲಾಖೆ ಮುಂದಾಗಿದೆ.
