ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಸೀರೆ ಕದ್ದ ಆರೋಪದ ಮೇಲೆ ಮಹಿಳೆಯ ಮೇಲೆ ಅಂಗಡಿ ಮಾಲೀಕನಿಂದ ಹಲ್ಲೆ

ಬೆಂಗಳೂರು : ಸೀರ ಕದ್ದಿದ್ದಾರೆ ಎಂದು ಆರೋಪಿಸಿ ಅಂಗಡಿ ಮಾಲೀಕ ಮಹಿಳೆಯೋಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೀರೆ ಅಂಗಡಿ ಮಾಲೀಕನ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಎಂಬುವರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದರೂ ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಮಹಿಳೆಯ ನೆರವಿಗೆ ಪೊಲೀಸರು ಬಂದಿಲ್ಲ. ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಮಹಿಳೆಯನ್ನೇ ವಶಕ್ಕೆ ಪಡೆದುಕೊಂಡಿದ್ದಾರೆ’ ಎಂದು ಸ್ಥಳೀಯರು ದೂರಿದ್ದಾರೆ