Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಬ್ದುಲ್ ರಹಿಮ್ ಹತ್ಯೆ ಬಳಿಕ ದ.ಕ. ಪೊಲೀಸ್ ವರಿಷ್ಠರಿಗೆ ವರ್ಗಾವಣೆ ಶಾಕ್

Spread the love

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಒಂದಾದ ಮೇಲೊಂದು ಎನ್ನುವಂತೆ ಹಿಂದೂ-,ಮುಸ್ಲಿಮರು ಹತ್ಯೆಗಳು ಆಗುತ್ತಿದ್ದು, ಕಾನೂನು ವ್ಯವಸ್ಥೆ ಕಾಪಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಬಂಟ್ವಾಳದಲ್ಲಿ ಅಬ್ದುಲ್ ರಹಿಮ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್‌ ಹಾಗೂ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ವರ್ಗಾವಣೆ ಇಂದು(ಮೇ 29) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರವಾಲ ಅವರನ್ನು ಕ್ರಿಮಿನಲ್ ಇನ್ವೆ,ಸ್ಟಿಗೇಶನ್ ಡಿಪಾರ್ಟ್ ಮೆಂಟ್ ಗೆ ವರ್ಗಾಯಿಸಲಾಗಿದೆ. ಇನ್ನು ಮಂಗಳೂರು ಪೊಲೀಸ್ ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ. ಇನ್ನು ಉಡುಪಿ ಎಸ್ಪಿಯಾಗಿದ್ದ ಅರುಣ್.ಕೆ ಅವರನ್ನು ದಕ್ಷಿಣ ಕನ್ನಡ ಪೊಲಿಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ನೊಂದೆಡೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಅವರನ್ನ ನೇಮಕ ಮಾಡಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಬೊರಸೆ ಭೂಷಣ್ ನೇಮಿಸಲಾಗಿದೆ. ಇನ್ನು ಇಡಾ ಮಾರ್ಟಿನ್ ಅವರಿಗೆ ಸ್ಥಳ ತೋರಿಸಲಾಗಿಲ್ಲ.

ಈ ವರ್ಗಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಈ ಸಭೆಯಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಬಗ್ಗೆ ಸುದೀರ್ಘಟವಾಗಿ ಚರ್ಚೆ ಮಾಡಿದ್ದು, ಜಿಲ್ಲೆಯಲ್ಲಿ ಕಾನುನು ಸುವ್ಯವಸ್ಥೆ ಬಿಗಿಗೊಳಿಸುವ ಸಂಬಂಧ ಮಹತ್ವದ ಮಾತುಕತೆಯಾಗಿದೆ.

ಎಷ್ಟೇ ಕಠಿಣ ಕ್ರಮಕೈಗೊಂಡರೂ ಜಿಲ್ಲೆಯಲ್ಲಿ ಪದೇ ಪದೇ ಪರಿಸ್ಥಿತಿ ಹದಗೆಡುತ್ತಿದೆ. ಹೀಗಾಗಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇದಕ್ಕೆ ಕಡಿವಾಣ ಹಾಕಲೇಬೇಕೆಂದು ತೀರ್ಮಾನಿಸಿದ್ದು, ಅದರಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ಖಡಕ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಾಡಿದ್ದು ಅಂದರೆ ಮೇ 31ಕ್ಕೆ ಮಂಗಳೂರಿಗೆ ಭೇಟಿ ನೀಡಲಿದ್ದು, ಸರಣಿ ಸಭೆ ಮಾಡಲಿದ್ದಾರೆ. ಇನ್ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಬಿಗಿಗೊಳಿಸುವ ಸಂಬಂಧ ಮಹತ್ವದ ಸಭೆ ಮಾಡಲಿದ್ದಾರೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಮಂಗಳೂರು ಪೊಲೀಸ್ ಆಯುಕ್ತರು ಭಾಗಿಯಾಗಲಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *