ಬ್ಯಾಂಕಾಕ್ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: 6 ಸಾವು, ದಾಳಿಕೋರ ಆತ್ಮಹತ್ಯೆ!

ಬ್ಯಾಂಕಾಕ್: ಥೈಲ್ಯಾಂಡ್‌ನ ಬ್ಯಾಂಕಾಕ್‌ನ ಚತುಚಕ್ ಎಂಬಲ್ಲಿ ಟೋರ್ ಕೊರ್ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ 6 ಜನರು ಮೃತರಾಗಿದ್ದಾರೆ. ಮೃತರಲ್ಲಿ ಓರ್ವ ವ್ಯಾಪಾರಿ, ಮೂವರ ಭದ್ರತಾ ಸಿಬ್ಬಂದಿ ಸೇರಿದ್ದಾರೆ ಎಂದು ವರದಿಯಾಗಿದೆ. ಆಗುಂತಕ ಗನ್ ಹಿಡಿದುಕೊಂಡು ಬಂದು ಗುಂಡಿನ ದಾಳಿ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿರುವ ವ್ಯಕ್ತಿ ಕೊನೆಗೆ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ಈ ದಾಳಿ ನಡೆಸಿದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ದೌಡಾಯಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಏನು ಎಂದು ತಿಳಿದು ಬಂದಿಲ್ಲ. ಈ ದಾಳಿಯಿಂದಾಗಿ ಟೋರ್ ಕೊರ್ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.