‘ಹೊಗೆ ಬಾಂಬ್ ಬಳಕೆಗೆ UAPA ಅನ್ವಯಿಸಲ್ಲ’: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಹೇಳಿಕೆ!

ಹೊಸದಿಲ್ಲಿ: 2023ರ ಡಿ.13ರಂದು ಸಂಸತ್ ಭವನದಲ್ಲಿ ಭದ್ರತಾ ಲೋಪಕ್ಕೆ ಕಾರಣವಾಗಿದ್ದ ಇಬ್ಬರು ಆರೋಪಿ ಗಳಿಗೆ ದಿಲ್ಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ಆದರೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿ ರುವ ಮೈಸೂರಿನ ಮನೋರಂಜನ್ ಜಾಮೀನು ಅರ್ಜಿ ವಿಚಾರಣೆ ಮುಂದು ವರಿದಿದ್ದು, ಜಾಮೀನು ಮಂಜೂರಾಗಿಲ್ಲ.

ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಿದ್ದು, ನೀಲಮ್ ಆಜಾದ್ ಮತ್ತು ಮಹೇಶ್ ಕುಮಾವತ್‌ರಿಗೆ ಜಾಮೀನು ಮಂಜೂರು ಮಾಡಿದೆ. 50,000 ರೂ. ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಒದಗಿಸು ವಂತೆ ಆದೇಶಿಸಿದೆ. ಅಲ್ಲದೆ ಈ ಪ್ರಕರಣ ಸಂಬಂಧ ಯಾವುದೇ ಮಾಧ್ಯಮಕ್ಕೆ ಸಂದರ್ಶನ ನೀಡುವುದಾಗಲೀ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಾಕುವಂತಿಲ್ಲ ಎಂದು ಸೂಚಿಸಿದೆ.

ಇವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಇದು ಅನ್ವಯ ವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಒಂದು ವೇಳೆ ಹೊಗೆ ಬಾಂಬ್ ಬಳಕೆಯನ್ನು ಉಗ್ರವಾದ ಎಂದು ಪರಿಗಣಿಸಿದರೆ, ಹೋಳಿ ಮತ್ತು ಐಪಿಎಲ್ ಪಂದ್ಯಗಳನ್ನು ಅಪರಾಧ ಎಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ.
