Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸೋಮನಾಥ್ ಸಾವು ಪ್ರಕರಣ: ನಿಷ್ಪಕ್ಷಪಾತ ತನಿಖೆ, ಪರಿಹಾರಕ್ಕೆ ಹಿಂದೂ ಮಹಾಸಭಾ ಆಗ್ರಹ

Spread the love

ಮಂಗಳೂರು: ಸುರತ್ಕಲ್‌ನ ಹೊಸಬೆಟ್ಟು ನಿವಾಸಿ ಸೋಮನಾಥ್ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ. ಎಲ್.ಕೆ. ಸುವರ್ಣ ಆರೋಪಿಸಿದ್ದು, ಮೃತನ ಕುಟುಂಬಕ್ಕೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸಬೆಟ್ಟು ಬೀಚ್‌ನಲ್ಲಿ ರಾತ್ರಿ ವೇಳೆ ಇದ್ದ ಯುವ ಜೋಡಿಯನ್ನು ಸ್ಥಳೀಯರು ವಿಚಾರಿಸಿದ ನೆಪದಲ್ಲಿ ಏಕಪಕ್ಷೀಯವಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಿರುವುದು ಸರಿಯಲ್ಲ. ಸ್ಥಳೀಯರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವ ಮೂಲಕ ಅಮಾಯಕ ಮೀನುಗಾರನೊಬ್ಬನ ಸಾವಿಗೆ ಕಾರಣವಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜದಲ್ಲಿ ಶಾಂತಿ ಭಂಗಕ್ಕೆ ಕಾರಣರಾದ ಹಾಗೂ ಸೋಮನಾಥ್ ಅವರ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾದ ಯುವ ಜೋಡಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೇವಲ ಒಂದು ಕಡೆಯ ದೂರನ್ನು ಆಧರಿಸಿ ಕ್ರಮ ಕೈಗೊಳ್ಳದೆ, ಘಟನೆಯ ಸಂಪೂರ್ಣ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಅಮಾಯಕ ಮೀನುಗಾರನೊಬ್ಬ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಹೇಳಿದ ಡಾ. ಎಲ್.ಕೆ. ಸುವರ್ಣ, ಸೋಮನಾಥ್ ಅವರ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪರಿಹಾರ ಘೋಷಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.


Spread the love
Share:

administrator

Leave a Reply

Your email address will not be published. Required fields are marked *