Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೈರುತ್ಯ ಮಾನ್ಸೂನ್ ದಕ್ಷಿಣ ಬಂಗಾಳ ಕೊಲ್ಲಿ ಹಾಗೂ ಅಂಡಮಾನ್ ದ್ವೀಪಗಳಲ್ಲಿ ಆರಂಭ

Spread the love

ನವದೆಹಲಿ: ನೈರುತ್ಯ ಮಾನ್ಸೂನ್ ಮಂಗಳವಾರ ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪ ಮತ್ತು ಉತ್ತರ ಅಂಡಮಾನ್ ಸಮುದ್ರದ ಕೆಲವು ಭಾಗಗಳಿಗೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಲ್ಲಿ ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಗಳು ಮತ್ತು ಅಂಡಮಾನ್ ಸಮುದ್ರದ ಮೇಲೆ ಪಶ್ಚಿಮ ದಿಕ್ಕಿನ ಗಾಳಿಯ ಬಲವು ಹೆಚ್ಚಾಗಿದೆ. ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಗಾಳಿಯ ವೇಗ 20 ನಾಟಿಕಲ್ ಮೈಲ್ ಮೀರಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಈ ಪ್ರದೇಶದಲ್ಲಿ ದೀರ್ಘ ತರಂಗ ವಿಕಿರಣ ಸಹ ಕಡಿಮೆಯಾಗಿದೆ. ಇದು ಮಾನ್ಸೂನ್ ಆಗಮನದ ಮುನ್ಸೂಚನೆಯನ್ನು ನೀಡುತ್ತದೆ. ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶಗಳು, ದಕ್ಷಿಣ ಬಂಗಾಳ ಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕೆಲವು ಭಾಗಗಳಿಗೆ ಮಾನ್ಸೂನ್ ಆಗಮಿಸಿದೆ. ಇನ್ನುಳಿದ ಅಂಡಮಾನ್ ಸಮುದ್ರದ ಭಾಗಗಳಿಗೆ ಹಾಗೂ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಿಗೆ ಮುಂದಿನ ಮರ‍್ನಾಲ್ಕು ದಿನಗಳಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಮೇ 27ರಂದು ಕೇರಳವನ್ನು ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *