Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೋಲಾರದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳಿಂದ ವಿಶೇಷ ಪೂಜೆ: “ಡಿ.ಕೆ.ಶಿ ಸಿಎಂ ಆಗಲಿ” ಎಂದು ಕೋಲಾರಮ್ಮ ದೇವಿಯಲ್ಲಿ ಪ್ರಾರ್ಥನೆ

Spread the love

ಕೋಲಾರ: ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ಕೋಲಾರದಲ್ಲಿ (Kolar) ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೋಲಾರ ನಗರದ ಕೋಟೆ ಬಡಾವಣೆಯಲ್ಲಿ ನೆಲೆಸಿರುವ ಶಕ್ತಿ ದೇವತೆ ಕೋಲಾರಮ್ಮಗೆ (Kolaramma Temple) ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಡಿಸಿಎಂ ಡಿಕೆಶಿ ಸಿಎಂ ಆಗಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ ಬಳಿಕ ಭಿತ್ತಿ ಪತ್ರಗಳನ್ನ ಹಿಡಿದು ಡಿಸಿಎಂ ಡಿಕೆಗೆ ಜೈಕಾರ ಕೂಗಿದರು. ಹತ್ತಾರು ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಪೂಜೆ ಸಲ್ಲಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ

ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಸುಜಿತ್ ಗೌಡ ವಿಶೇಷ ಪೂಜೆ ಸಲ್ಲಿಸಿ ಡಿಕೆಶಿ ಮುಂದೆ ಸಿಎಂ ಆಗಲಿ ಎಂದು ಹೇಳಿದರು. ಇನ್ನೂ ದೇವಾಲಯದ ಆವರಣದಲ್ಲೆ ಈಡುಗಾಯಿ ಹೊಡೆದು ವಿಶೇಷ ಪೂಜೆ ಸಲ್ಲಿಸಲಾಯಿತು. ಇನ್ನೂ ಇದೆ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನ ಬಿಟ್ಟು ಕೊಡಲಿ ಎಂದು ಪ್ರಾರ್ಥನೆ ಮಾಡಿದರು. ಅಲ್ಲದೆ ಡಿಕೆಶಿ ಸಿಎಂ ಆದ್ರೆ ಹಲವು ಕೋರಿಕೆ ಗಳನ್ನು ತಾಯಿಗೆ ಈಡೇರಿಸುವುದಾಗಿ ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *