Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶ್ರೀನಗರ: ಲ್ಯಾಂಡಿಂಗ್ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು!

Spread the love

ಶ್ರೀನಗರ: ಲ್ಯಾಂಡಿಂಗ್‌ ಮಾಡುವ ವೇಳೆ ಇಂಡಿಗೋ ವಿಮಾನವು ರನ್‌ವೇ ಪಾರ್ಕಿಂಗ್ ಪ್ರದೇಶದಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾರುವ ಘಟನೆ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ನವಿ ಮುಂಬೈನಿಂದ ಬಂದಿದ್ದ ಇಂಡಿಗೋ ವಿಮಾನ ಬೆಳಗ್ಗೆ 9:02 ಗಂಟೆ ಸುಮಾರಿಗೆ ಶ್ರೀನಗರ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್‌ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆವಿಮಾನವು ವಿಷ್ಯುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ತನಿಖೆಗೆ ಆದೇಶಿಸಲಾಗಿದೆ. ಅಪಘಾತದ ಬಳಿಕ ಘಟನೆಗೆ ಕಾರಣ ಏನು? ಎಂಬುದನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ. ವಿಚಾರಣೆ ಪೂರ್ಣಗೊಂಡ ಬಳಿಕವೇ ನಿಖರ ಕಾರಣ ತಿಳಿದುಬರಲಿದೆ. ಅಲ್ಲಿಯವರೆಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಡಿಕ್ಕಿಯ ರಭಸಕ್ಕೆ ವಿಮಾನದ ಮುಂಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಅಪಘಾತದ ಬೆನ್ನಲ್ಲೇ ವಿಮಾನ ನಿಲ್ದಾಣದ ರಕ್ಷಣಾ ಸಿಬ್ಬಂದಿಗಳು ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾರೆ. ಸದ್ಯ ಹಾನಿಗೊಳಗಾದ ವಿಮಾನವನ್ನು ತಾಂತ್ರಿಕ ತಪಾಸಣೆಗಾಗಿ ಗ್ರೌಂಡ್ ಮಾಡಲಾಗಿದ್ದು ಪರಿಶೀಲನೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *