Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

SSLC ರಿಸಲ್ಟ್: ಕುಂದಾಪುರದ ಪ್ರೀತಮ್ ಪೂಜಾರಿಗೆ 625ಕ್ಕೆ 625 ಅಂಕ!

Spread the love

ಕುಂದಾಪುರ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಪ್ರೀತಮ್ ಪೂಜಾರಿ ಸೇರಿ ಒಟ್ಟು ಏಳು ಮಂದಿ ಗರಿಷ್ಠ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ.
ಪ್ರೀತಮ್‌ ಬಿಸ್ಕಲ್ಕಟ್ಟೆ ನಿವಾಸಿ ಗಣಪತಿ ಪೂಜಾರಿ-ನಾಗರತ್ನಾ ದಂಪತಿಯ ಇಬ್ಬರ ಮಕ್ಕಳ ಪೈಕಿ ಹಿರಿಯ ಪುತ್ರ. ತಂದೆ ಗಣಪತಿಯವರು ಶ್ರೀ ಲಕ್ಷ್ಮೀ ಎಕ್ಸೆಸ್ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್. ತಾಯಿ ನಾಗರತ್ನಾ ಗೃಹಿಣಿ. ಎಲ್.ಕೆ.ಜಿ.ಯಿಂದಲೂ ಈತ ಮದ‌ರ್ ಥೆರೆಸಾ ಸಂಸ್ಥೆಯಲ್ಲಿ ಕಲಿತಿದ್ದ.

ಈ ಬಗ್ಗೆ ‘ವಾರ್ತಾಭಾರತಿ’ಗೆ ಪ್ರತಿಕ್ರಿಯಿಸಿದ ಸಾಧಕ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ, ಅಂದಿನ ಪಾಠವನ್ನು ಅಂದೇ ಕಣ್ಣುಹಾಯಿಸುತ್ತಿದ್ದೆ. ಪಠ್ಯವನ್ನು ಓದಿ ಮುಗಿಸಲು ತಿಂಗಳ ಗುರಿಯನ್ನು ಇಟ್ಟುಕೊಂಡಿದ್ದೆ. ಪೋಷಕರು ಹಾಗೂ ವಿದ್ಯಾಸಂಸ್ಥೆಯವರ ಪ್ರೋತ್ಸಾಹ, ಮಾರ್ಗದರ್ಶನ ಸಾಧನೆಗೆ ಪ್ರೇರಣೆ. ಮುಂದೆ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿಎಸ್ ಓದಿ ಜೆಇಇ ಪರೀಕ್ಷೆ ಬರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆಯ ಸಂಸ್ಥಾಪಕರಾದ ಶಮಿತಾ ರಾವ್ ಬಲ್ಮಠ, ರೇನಿಟಾ ಲೋಬೋ ಮಾತನಾಡಿ, ವಿದ್ಯಾರ್ಥಿ ಪ್ರೀತಮ್ ಪೂಜಾರಿ ಸಾಧನೆ ಸಂತಸ ತಂದಿದೆ. ಆತ ವಿದ್ಯಾಭ್ಯಾಸ ಹಾಗೂ ಇತರ ಚಟುವಟಿಕೆಯಲ್ಲಿ ಸದಾ ಚುರುಕಾಗಿದ್ದ. 625 ಅಂಕ ಪಡೆಯುವ ನಿರೀಕ್ಷೆಯೂ ನಮಗೆ ಇತ್ತು. ಆತನ ಪರಿಶ್ರಮದ ಜೊತೆಗೆ ಗುರುಹಿರಿಯರ ಜೊತೆ ವಿನಮ್ರತೆ ಹೊಂದಿದ್ದ. ಈ ಬಾರಿ ರಾಜ್ಯಮಟ್ಟದ ಕ್ವಿಝ್ ನಲ್ಲಿ ಎರಡನೇ ಸ್ಥಾನಿಯಾಗಿದ್ದ ಎಂದರು.


Spread the love
Share:

administrator

Leave a Reply

Your email address will not be published. Required fields are marked *