ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹದಿಂದ ಕಾಲ್ತುಳಿತ

ಉತ್ತರಾಖಂಡ : ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ.

ಉತ್ತರಾಖಂಡದ ಹರಿದ್ವಾರದಲ್ಲಿರುವ ಮಾನಸ ದೇವಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿ, “ಎಸ್ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ವಿಷಯದ ಬಗ್ಗೆ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.