Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೇಪಾಳದಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ: ಭಾರತ ಸೇರಿದಂತೆ ನೆರೆಯ ರಾಷ್ಟ್ರಗಳಲ್ಲೂ ಭೂಮಿ ಕಂಪನ!

Spread the love

ಕಠ್ಮಂಡು: ನೇಪಾಳದಲ್ಲಿ (Nepal) ಇಂದು ಬೆಳ್ಳಂಬೆಳಗ್ಗೆ 5.3 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು, ಭಾರತ ಸೇರಿದಂತೆ ನೆರೆಯ ರಾಷ್ಟ್ರಗಳಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.

ಮಂಗಳವಾರ (ಇಂದು) ಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 5.3 ತೀವ್ರತೆ ದಾಖಲಾಗಿದೆ. ಇದರಿಂದ ಭಾರತದ ಬಿಹಾರ, ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಪಶ್ಚಿಮ ಬಂಗಾಳದಲ್ಲಿ (West Bengal), ಡಾರ್ಜಿಲಿಂಗ್ ಮತ್ತು ಜಲಪೈಗುರಿ ಸೇರಿದಂತೆ ಉತ್ತರ ಬಂಗಾಳದ ಹಲವಾರು ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ಸ್ಥಳೀಯ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರೆ. ಭೂತಾನ್, ಬಾಂಗ್ಲಾದೇಶದಲ್ಲೂ ಭೂಕಂನ ಆಗಿದೆ ಎಂದು ವರದಿಗಳು ತಿಳಿಸಿವೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಇಂದು ಬೆಳಗ್ಗೆ 7.02ಕ್ಕೆ ಭೂಕಂಪ ಸಂಭವಿಸಿದ್ದು, ಕೋಶಿ ಪ್ರಾಂತ್ಯದ ಲೆಲೆಪ್ ಸಮೀಪ 20 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಕೇಂದ್ರಬಿಂದು ನೇಪಾಳದಲ್ಲಿ 27.855° ಉತ್ತರ ಅಕ್ಷಾಂಶ ಮತ್ತು 87.909° ಪೂರ್ವ ರೇಖಾಂಶದಲ್ಲಿ ಪತ್ತೆಯಾಗಿದೆ.ಚೀನಾದ ಕೆಲ ಭಾಗಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಆದ್ರೆ, ಯಾವುದೇ ಸಾವುನೋವು ಸಂಭವಿಸಿಲ್ಲ.


Spread the love
Share:

administrator

Leave a Reply

Your email address will not be published. Required fields are marked *