Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಸವಾರ ವಿದ್ಯಾರ್ಥಿಗೆ ಕಾರು ಡಿಕ್ಕಿ – ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಲಿಖಿತ್

Spread the love

ಬಂಟ್ವಾಳ: ದ್ವಿಚಕ್ರದಲ್ಲಿದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ.

ಲಿಖಿತ್ ರಜೆಯಲ್ಲಿ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗುತ್ತಿದ್ದ ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಸುಮಾರು 5.30 ರ ವೇಳೆಗೆ ಬಿಸಿರೋಡಿನಿಂದ ಮನೆ ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿಯಾಗಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆ ಗೆ ಸ್ಪಂದಿಸದೆ ಇಂದು ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಟ್ರಾಫಿಕ್ ಪೋಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *