Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಕ್ಸಲರ ಶರಣಾಗತಿ ಯಶಸ್ಸು: ನಕ್ಸಲ್ ಪೀಡಿತ ಜಿಲ್ಲೆಗಳು 125 ರಿಂದ 11ಕ್ಕೆ ಇಳಿಕೆ

Spread the love

ದೆಹಲಿ: 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ‘ಒಲಿಂಪಿಕ್ಸ್ ಕ್ರೀಡಾಕೂಟ’ದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ನಕ್ಸಲರ ಶರಣಾಗತಿ ಬಗ್ಗೆ ತಿಳಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯ ಜಾಗತಿಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “24 ಗಂಟೆಗಳಲ್ಲಿ 300 ಮಾವೋವಾದಿಗಳು ಸೇರಿ 75 ಗಂಟೆಗಳಲ್ಲಿ ಒಟ್ಟು 303 ನಕ್ಸಲರು ಶರಣಾಗಿದ್ದಾರೆ. ಮಾವೋವಾದಿಗಳು ಕಳೆದ 50-55 ವರ್ಷಗಳಲ್ಲಿ ಸಾವಿರಾರು ಜನರನ್ನ ಕೊಂದಿದ್ದಾರೆ. ಅಲ್ಲದೇ ಶಾಲೆಗಳನ್ನಾಗಲಿ, ಆಸ್ಪತ್ರೆಗಳನ್ನಾಗಲಿ ನಿರ್ಮಿಸಲು ಬಿಡಲಿಲ್ಲ. ವೈದ್ಯರನ್ನ ಚಿಕಿತ್ಸಾಲಯಗಳಿಗೆ ಹೋಗದಂತೆ ತಡೆದರು. ಹಲವು ಸಂಸ್ಥೆಗಳ ಮೇಲೆ ದಾಳಿ ಮಾಡ್ತಿದ್ದರು. ಮಾವೋವಾದಿಗಳ ಭಯೋತ್ಪಾದನೆಯಿಂದ ಯುವಜನರಿಗೆ ಅನ್ಯಾಯವಾಗಿತ್ತು. ಇದೆಲ್ಲದರಿಂದ ನಾನು ಬಹಳ ಕೋಪಗೊಂಡಿದ್ದೆ. ಇದೇ ಮೊದಲಬಾರಿಗೆ ಜಗತ್ತಿನ ಮುಂದೆ ನನ್ನ ನೋವನ್ನ ಹೇಳಿಕೊಳ್ಳುತ್ತಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದರು.”ನಮ್ಮ ಸರ್ಕಾರ ಅನ್ಯಾಯಕ್ಕೆ ಒಳಗಾದ ಹಾಗೂ ದಾರಿ ತಪ್ಪಿದ ಯುವಜನರನ್ನ ತಲುಪಿ, ಮತ್ತೆ ಅವರನ್ನ ಮುಖ್ಯವಾಹಿನಿಗೆ ತರಲು ವಿಶೇಷ ಪ್ರಯತ್ನಗಳನ್ನ ನಡೆಸಿದೆ. ಇಡೀ ದೇಶ ಇಂದು ಈ ಪ್ರಯತ್ನಗಳ ಫಲಿತಾಂಶ ನೋಡುತ್ತಿದೆ. ಈಗ 303 ನಕ್ಸಲರು ಶರಣಾಗಿದ್ದಾರೆ. ಛತ್ತೀಸ್‌ಗಢದಲ್ಲಿ ಗುರುವಾರ ಒಂದೇ ದಿನ 170 ನಕ್ಸಲರು ಶರಣಾಗಿದ್ದಾರೆ. ಇವರು ಸಾಮಾನ್ಯ ಜನರಾಗಿರಲಿಲ್ಲ. ಇವರ ತಲೆಗೆ ಬಹುಮಾನ ನಿಗದಿ ಮಾಡಲಾಗಿತ್ತು. ಈಗ ಅವರೇ ಮುಕ್ತವಾಗಿ ಶರಣಾಗಿದ್ದು, ಅವರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದರು.”ಸಾಮೂಹಿಕ ಶರಣಾಗತಿಯ ಪರಿಣಾಮವಾಗಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಇಳಿಕೆಯಾಗಿದೆ. ಹಿಂದೆ 125 ಇದ್ದ ನಕ್ಸಲ್ ಪೀಡಿತ ಜಿಲ್ಲೆಗಳು ಈಗ 11ಕ್ಕೆ ಇಳಿಕೆಯಾಗಿದೆ. ನಕ್ಸಲ್ ಚಟುವಟಿಕೆಗಳನ್ನ ತಡೆಯುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ. ಈ ಹಿಂದೆ ಬಸ್ತಾರ್‌ನಲ್ಲಿ (ತೀವ್ರವಾಗಿ ಬಾಧಿತವಾದ ಜಿಲ್ಲೆ) ಮಾವೋಗಳು ವಾಹನಗಳನ್ನ ಸ್ಫೋಟಿಸಿ ಭದ್ರತಾ ಸಿಬ್ಬಂದಿಗಳನ್ನ ಹತ್ಯೆಗೈದಿದ್ದರು. ಇಂದು ಅಲ್ಲಿನ ಯುವಕರು ‘ಬಸ್ತಾರ್ ಒಲಿಂಪಿಕ್ಸ್’ ಆಯೋಜಿಸುತ್ತಿದ್ದಾರೆ. ಇದು ಅತಿದೊಡ್ಡ ಬದಲಾವಣೆ. ಈಗ ಶಾಂತಿಯ ದೀಪಾವಳಿ ಆಚರಿಸಲು ಸಾಧ್ಯವಾಗುತ್ತದೆ” ಎಂದರು.”ಕಾಂಗ್ರೆಸ್ ಅವರನ್ನ ಗಮನಿಸಲಿಲ್ಲ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ, ಈ ಪರಿಸರ ವ್ಯವಸ್ಥೆಯ ಕುರಿತು ಚರ್ಚೆಸೋದನ್ನೇ ಸಂಪೂರ್ಣವಾಗಿ ನಿಗ್ರಹಿಸಲಾಗಿತ್ತು” ಎಂದು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *