Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೊಕಾರೊ ಎಕ್ಸ್‌ಪ್ರೆಸ್ ರೈಲಿನಲ್ಲೇ ಗರ್ಭಿಣಿಗೆ ಯಶಸ್ವಿ ಹೆರಿಗೆ ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆ

Spread the love

ವಿಜಯವಾಡ: ರೈಲು ಪ್ರಯಾಣದ ನಡುವೆ  ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಗೆ ರೈಲ್ವೆ ಇಲಾಖೆ ಸಿಬ್ಬಂದಿ ಸಕಾಲದಲ್ಲಿ ಸಹಾಯದ ಹಸ್ತ ಚಾಚಿ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ  ಆಂಧ್ರಪ್ರದೇಶದಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಇಶಾದ್ ಮತ್ತು ತರನ್ನಮ್ ಖಾತುನ್ ದಂಪತಿಗಳು ಏಪ್ರಿಲ್ 05 ರಂದು ಚೆನ್ನೈನಿಂದ ಧನಬಾದ್‌ಗೆ  ಬೊಕಾರೊ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 13352) ಮೂಲಕ ಪ್ರಯಾಣಿಸುತ್ತಿದ್ದರು. ಎಂಟು ತಿಂಗಳ ಗರ್ಭಿಣಿಯಾಗಿದ್ದ ತರನ್ನಮ್ ಅವರಿಗೆ ರೈಲು ಅನ್ನಾವರಂ ನಿಲ್ದಾಣವನ್ನು ದಾಟಿದ ನಂತರ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬದವರು ಆತಂಕಕ್ಕೊಳಗಾಗಿದ್ದಾಗ ರೈಲ್ವೆ ಸಿಬ್ಬಂದಿ ಸಹಾಯಕ್ಕೆ ಧಾವಿಸಿದರು.

ಬಿ1 ಕೋಚ್‌ನಲ್ಲಿ ಕರ್ತವ್ಯದಲ್ಲಿದ್ದ ಟಿಕೆಟ್ ಪರಿಶೀಲನಾ ಅಧಿಕಾರಿ (TTE) ಜಿ. ಜ್ಯೋತಿ  ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಗಮನಿಸಿ, ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ, ವೇಳಾಪಟ್ಟಿಯಲ್ಲಿ ನಿಲುಗಡೆ ಇಲ್ಲದಿದ್ದರೂ ಸಹ ಎಲಮಂಚಿಲಿ ನಿಲ್ದಾಣ ದಲ್ಲಿ ರೈಲಿಗೆ ವಿಶೇಷ ನಿಲುಗಡೆ ಕಲ್ಪಿಸಿದರು.

ಹೆರಿಗೆಯ ಸಮಯದಲ್ಲಿ ಮಹಿಳೆಯ ಗೌಪ್ಯತೆಯನ್ನು ಕಾಪಾಡುವ ಉದ್ದೇಶದಿಂದ ಕೋಚ್‌ನಲ್ಲಿದ್ದ ಪುರುಷ ಪ್ರಯಾಣಿಕರನ್ನು ಹೊರಗೆ ಕಳುಹಿಸಿ ಸುರಕ್ಷಿತ ವಾತಾವರಣ ನಿರ್ಮಿಸಲಾಯಿತು. ಸಿಬ್ಬಂದಿಯ ಸಹಾಯದಿಂದ ರೈಲಿನಲ್ಲೇ ಹೆರಿಗೆಯಾಗಿದ್ದು, ತಾಯಿ-ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ. ನಂತರ ಸಿದ್ಧವಿದ್ದ 108 ಆಂಬ್ಯುಲೆನ್ಸ್ ಮೂಲಕ ಅವರನ್ನು ಎಲಮಂಚಿಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ಕಾರ್ಯಾಚರಣೆಗಾಗಿ ಬೊಕಾರೊ ಎಕ್ಸ್‌ಪ್ರೆಸ್ ರೈಲನ್ನು ಸುಮಾರು 40 ನಿಮಿಷಗಳ ಕಾಲ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ರೈಲ್ವೆ ಸಿಬ್ಬಂದಿಯ ಈ ಕರ್ತವ್ಯನಿಷ್ಠೆ ಮತ್ತು ಸಮಯಪ್ರಜ್ಞೆಯನ್ನು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *