ಕಾವೂರು ವಿದ್ಯುತ್ ಉಪಕೇಂದ್ರದಲ್ಲಿ ದಿಢೀರ್ ಬೆಂಕಿ: ಸುತ್ತಮುತ್ತ ಆತಂಕದ ವಾತಾವರಣ

ಮಂಗಳೂರು:ಕಾವೂರು ವಿದ್ಯುತ್ ಉಪಕೇಂದ್ರದಲ್ಲಿ ಬೆಂಕಿ ಅವಘಡ – ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು!ಮಂಗಳೂರಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ವಿದ್ಯುತ್ ಉಪಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಘಟನೆಯ ವೇಳೆ ಭಾರೀ ಶಬ್ದ ಕೇಳಿಬಂದಿದ್ದು, ಸುತ್ತಮುತ್ತಲಿನ ಸಾರ್ವಜನಿಕರು ಆತಂಕಗೊಂಡಿದ್ದಾರೆ.ವಿದ್ಯುತ್ ಉಪಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
