ಚಲಿಸುತ್ತಿದ್ದ ರೈಲಿನಲ್ಲಿ ಹಠಾತ್ ಅನಾಹುತ; ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರು ಪ್ರಯಾಣಿಕರು

ಬಳ್ಳಾರಿ: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
