Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪತ್ರಕರ್ತ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ

Spread the love

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.

ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದಿದ್ದಾರೆ.

ದೇವಸ್ಥಾನದ ಒಳಗೆ ಪೂಜೆ ನಡೆಸುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲು ಸಾಧ್ಯವಿಲ್ಲ.  ಸಂಪೂರ್ಣವಾಗಿ ಇದೊಂದು ರಾಜಕೀಯವಾಗಿದ್ದು, ಧಾರ್ಮಿಕ ಕಾರ್ಯಗಳಿಗಾಗಿ ಅವರನ್ನು ಆಹ್ವಾನಿಸಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್​ನಲ್ಲೂ ವಜಾ

ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇತ್ತೀಚೆಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟಿನಲ್ಲಾದರೂ ನ್ಯಾಯ ಸಿಗಬಹುದು ಎಂಬ ಭರವಸೆ ಇತ್ತು. ಆದರೆ ಅದು ಕೂಡ ಇಲ್ಲವಾಯಿತು ಎಂದು ತೀರ್ಪಿನ ನಂತರ ಪ್ರತಾಪ್ ಸಿಂಹ ನಿರಾಶೆ ವ್ಯಕ್ತಪಡಿಸಿದ್ದರು.

ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಅನೇಕ ನಾಯಕರು ಟೀಕೆ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *