Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

NCERT ಪಠ್ಯ ವಿವಾದ: ಸುಪ್ರೀಂ ಕೋರ್ಟ್ ಮುಂದೆ ಕ್ಷಮೆಯಾಚಿಸಿದ ಕೇಂದ್ರ ಸರ್ಕಾರ; ಪಠ್ಯ ತಿದ್ದುಪಡಿಗೆ ಒಪ್ಪಿಗೆ

Spread the love

ಹೊಸದಿಲ್ಲಿ: 8ನೇ ತರಗತಿಯ NCERT ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗ ಭ್ರಷ್ಟಾಚಾರದ’ ಕುರಿತಾದ ವಿವಾದಾತ್ಮಕ ಅಧ್ಯಾಯದ ಕುರಿತು ಕೇಂದ್ರ ಸರಕಾರ ಗುರುವಾರ ಸುಪ್ರೀಂ ಕೋರ್ಟ್ ಮುಂದೆ ಕ್ಷಮೆಯಾಚಿಸಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಶಿಕ್ಷಣ ಸಚಿವಾಲಯದ ಕೆಲಸದಿಂದ ಶಾಶ್ವತವಾಗಿ ಹೊರಗಿಡಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದೆ.
“ನಾವು ಈ ಬಗ್ಗೆ ಆಳವಾದ ತನಿಖೆ ನಡೆಸಲು ಬಯಸುತ್ತೇವೆ. ನ್ಯಾಯಾಂಗದ ಮುಖ್ಯಸ್ಥರಾಗಿ, ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಕರ್ತವ್ಯ ಇದಕ್ಕೆ ಕಾರಣರಾದವರ ತಲೆದಂಡವಾಗಬೇಕು. ನಾನು ಈ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸುವುದಿಲ್ಲ. ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ತಿಳಿದುಕೊಳ್ಳಲು ನಾವು ಬಯಸುತ್ತೇವೆ ಎಂದು ಸಿಜೆಐ ಸೂರ್ಯಕಾಂತ್ ಹೇಳಿದ್ದಾರೆ.
NCERT ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗ ಭ್ರಷ್ಟಾಚಾರದ’ ಕುರಿತಾದ ಅಧ್ಯಾಯದ ಕುರಿತು ಬುಧವಾರ ಮುಖ್ಯ ನ್ಯಾಯಮೂರ್ತಿ ಗಂಭೀರವಾದ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ನ್ಯಾಯಾಂಗದ ಸಮಗ್ರತೆಯನ್ನು ಕೆಣಕುವ ಅಥವಾ ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಸುಪ್ರೀಂ ಕೋರ್ಟ್ ಅನುಮತಿಸುವುದಿಲ್ಲ ಎಂದು ಎಚ್ಚರಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *