ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ – ಮೈಸೂರು ರಾಜವಂಶಸ್ಥರಿಗೆ ₹3,400 ಕೋಟಿ ಟಿಡಿಆರ್ ನೀಡಲು ಸೂಚನೆ

ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಇದರಿಂದಾಗಿ ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣದ ಅಧಿಕಾರವನ್ನು ತನ್ನ ಬಳಿಯೇ ಇಟ್ಟುಕೊಳ್ಳುವ ಉದ್ದೇಶಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ
