Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ಶಾಕ್; ಮುಂದೂಡಿಕೆ ಮನವಿಗೆ ಅಸಮಾಧಾನ!

Spread the love

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ (Mekedatu Dam Project) ಅನುಮತಿ ನೀಡದಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ (Supreme Court) ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸುವ ಸಂದರ್ಭದಲ್ಲಿ ತಮಿಳುನಾಡು ಸರ್ಕಾರದ ವಕೀಲರನ್ನ ಪ್ರಶ್ನಿಸಿದೆ. ಹಿರಿಯ ವಕೀಲರು ಲಭ್ಯವಿಲ್ಲ ಎಂಬ ಕಾರಣ ನೀಡಿ ವಿಚಾರಣೆಯನ್ನ ಮುಂದೂಡುವಂತೆ ತಮಿಳುನಾಡು ಸರ್ಕಾರದ (Tamil Nadu Government) ಪರ ವಕೀಲರು ಮನವಿ ಮಾಡಿದ್ದರು.

ಇದೇ ಕಾರಣ ನೀಡಿ ಹಿಂದಿನ ವಿಚಾರಣೆಯಲ್ಲೂ ಮುಂದೂಡಿಕೆ ಕೋರಲಾಗಿತ್ತು. ಪದೇಪದೇ ಇದೇ ರೀತಿಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡುತ್ತಿರುವುದಕ್ಕೆ ನ್ಯಾಯಪೀಠ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಅರ್ಜಿಗಳು ನ್ಯಾಯಾಲಯದಲ್ಲಿ ಈಗಾಗಲೇ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಕಾರಣವಾಗುತ್ತವೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ತಮಿಳುನಾಡು ಸರ್ಕಾರದ ಮುಂದೂಡಿಕೆ ಮನವಿಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದೆ.

2ನೇ ಬಾರಿಗೆ ಮುಖಭಂಗ
ಸುಪ್ರೀಂ ನಿರ್ಧಾರದಿಂದ ಇಂದು ತಮಿಳುನಾಡು ಸರ್ಕಾರಕ್ಕೆ 2ನೇ ಬಾರಿಗೆ ಮುಖಭಂಗವಾಗಿದೆ. ಕಳೆದ ವಾರ ಕೂಡ ಬಾಕಿ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಸುಪ್ರೀಂ ನಿಂದ ಮುಖಭಂಗ ಅನುಭವಿಸಿತ್ತು. ಕರ್ನಾಟಕದಿಂದ (Karnataka) ಬಾಕಿ ಇರುವ 11 ಟಿಎಂಸಿ ಹೆಚ್ಚುವರಿ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಎರಡು ಮಧ್ಯಂತರ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.


Spread the love
Share:

administrator

Leave a Reply

Your email address will not be published. Required fields are marked *