ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಶಂಕಿತ ಉಗ್ರರು ಎನ್ಕೌಂಟರ್ನಲ್ಲಿ ಹತ

ಶ್ರೀನಗರ: ʻಆಪರೇಷನ್ ಮಹಾದೇವ್ʼ ಅಡಿಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಭದ್ರತಾ ಪಡೆಗಳು ಶ್ರೀನಗರದ ಲಿಡ್ವಾಸ್ ಪ್ರದೇಶದಲ್ಲಿ ಮೂವರು ವಿದೇಶಿ ಉಗ್ರರನ್ನ ಹತ್ಯೆಗೈದಿವೆ.

ಸೇನೆಯ ಹಿರಿಯ ಅಧಿಕಾರಿಗಳ ಪ್ರಕಾರ, ಈ ಮೂವರು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರೆಂದು ಶಂಕಿಸಲಾಗಿದೆ. ಅಲ್ಲದೇ ಲಷ್ಕರ್ ಮುಖವಾಣಿ ಟಿಆರ್ಎಫ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.
ಸೇನೆಯ ಚಿನಾರ್ ಕಾರ್ಪ್ಸ್ ಕಂಪನಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಯಶಸ್ವಿ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನ ಹತ್ಯೆಗೈಯಲಾಗಿದೆ. ಲಿಡ್ವಾಸ್ನ ದಚಿಗಮ್ ಶ್ರೀನಗರದ ಹೊರವಲಯದಲ್ಲಿರುವ ದಟ್ಟ ಅರಣ್ಯ ಪ್ರದೇಶವಾಗಿದೆ. ಇಲ್ಲಿನ ಬೆಟ್ಟದ ದುರ್ಗಮ ಹಾದಿಯು ಟ್ರಾಲ್ಗೆ ಸಂಪರ್ಕ ಕಲ್ಪಿಸುತ್ತದೆ. ಈ ಪ್ರದೇಶದಲ್ಲಿ ಹಿಂದೆಯೂ ಟಿಆರ್ಎಫ್ ಉಗ್ರ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿತ್ತು ಎಂದು ವರದಿಗಳು ತಿಳಿಸಿವೆ.
ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರಿದಿದೆ. ಕಳೆದ ಜನವರಿ ತಿಂಗಳಲ್ಲಿ ಈ ಪ್ರದೇಶದಲ್ಲಿ ಟಿಆರ್ಎಫ್ ಉಗ್ರರ ಅಡಗು ತಾಣವನ್ನಸೇನೆ ಧ್ವಂಸಗೊಳಿಸಿತ್ತು. ಆದ್ರೆ 2 ದಿನಗಳ ಹಿಂದೆ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಿದೆ. ಅಲ್ಲದೇ ಇನ್ನಷ್ಟು ಉಗ್ರರು ಈ ಪ್ರದೇಶದಲ್ಲಿರುವ ಶಂಕೆ ವ್ಯಕ್ತವಾಗಿದೆ.
ದಚಿಗಮ್ ಅರಣ್ಯವನ್ನ ಈಗಾಗಲೇ ಟಿಆರ್ಎಫ್ನ ಮುಖ್ಯ ಅಡಗುತಾಣವೆಂದು ಪರಿಗಣಿಸಲಾಗಿದೆ. ಇದೇ ಗುಂಪು ಇತ್ತೀಚೆಗೆ ಎಲ್ಒಸಿ ಬಳಿ ನಡೆದಿದ್ದ ನೆಲಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು, ಇದರಲ್ಲಿ ಓರ್ವ ಸೈನಿಕ ಹುತಾತ್ಮರಾಗಿ ಮೂವರು ಗಾಯಗೊಂಡಿದ್ದರು. ಇನ್ನೂ ಕಾರ್ಯಾಚರಣೆ ಹಿನ್ನೆಲೆ ಸಾರ್ವಜನಿಕರು ಮನೆಯಿಂದ ಆಚೆ ಬರದಂತೆ ಭದ್ರತಾ ಪಡೆದಗಳು ಎಚ್ಚರಿಕೆ ನೀಡಿವೆ.
