ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ

ಬಿಜಕಲ್ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಪ್ಪ ತೆಗ್ಗಿನಮನಿ ಅವರ ಪುತ್ರ ಶ್ರವಣಕುಮಾರ(8) ಹಾಗೂ ಮಲ್ಲಮ್ಮ ನೀಲಪ್ಪ ತೆಗ್ಗಿನಮನಿ ಮೃತಪಟ್ಟವರು.
ಮಕ್ಕಳು ಕುಟುಂಬದವರಿಗೆ ಜಮೀನಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮಳೆಯಿಂದಾಗಿ ಕೃಷಿಹೊಂಡದಲ್ಲಿ ನೀರು ತುಂಬಿಕೊಂಡಿತ್ತು. ಆಕಸ್ಮಿಕವಾಗಿ ಅಲ್ಲಿಗೆ ಹೋದ ಮಕ್ಕಳು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
