ರಾಮನಗರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಅನುಮಾನಾಸ್ಪದ ಮರಣ – ಕಾರು ಪಕ್ಕದಲ್ಲಿ ಶವ ಪತ್ತೆ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ (45) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬಯಲು ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರವೊಂದರ ಪಕ್ಕದಲ್ಲಿ ಲೋಕೇಶ್ ಅವರ ಶವ ಪತ್ತೆಯಾಗಿದೆ. ಲೋಕೇಶ್ ಅವರ ಮೃತದೇಹದ ಬಳಿ ವಿಷದ ಬಾಟಲಿ ಪತ್ತೆಯಾಗಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

