ಬಯಲಾಯ್ತು ಸ್ವಾಮಿ ಚೈತನ್ಯಾನಂದನ ಕಾಮಲೀಲೆ: ಶಿಕ್ಷಣದ ಹೆಸರಿನಲ್ಲಿ ದೌರ್ಜನ್ಯ, ಕಿರುಕುಳಕ್ಕೆಂದೇ ಒಂದು ಕೊಠಡಿ

ನವದೆಹಲಿ: ದೆಹಲಿಯ ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ(Chaitanyananda Saraswati) ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ನೀಡಿರುವ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರು ಬೃಹತ್ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಸಮಯದಲ್ಲಿ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ದಕ್ಷಿಣ ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಖಾಸಗಿ ನಿರ್ವಹಣಾ ಸಂಸ್ಥೆಯ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಆರೋಪಿ ಸ್ವಾಮಿ ಈ ಹಿಂದೆ ಪಾರ್ಥಸಾರಥಿ ಎಂದು ಕರೆಯಲ್ಪಡುತ್ತಿದ್ದರು , ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್-ರಿಸರ್ಚ್‌ನ ನಿರ್ದೇಶಕರಾಗಿದ್ದರು.

ಚಿತ್ರಹಿಂಸೆ ನೀಡಲು ಇತ್ತೊಂದು ಕೊಠಡಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದಲ್ಲಿ ಓದುತ್ತಿರುವ ದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸ್ಥೆಯ ಡೀನ್ ಮತ್ತು ಇಬ್ಬರು ಮಹಿಳಾ ಸಿಬ್ಬಂದಿಯೊಂದಿಗೆ ಶಾಮೀಲಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳ ಪ್ರಕಾರ, ಚೈತನ್ಯಾನಂದ ತನ್ನ ನೆಲಮಹಡಿಯ ಕಚೇರಿಯನ್ನು ಲೈಂಗಿಕ ಕಿರುಕುಳದ ತಾಣವನ್ನಾಗಿ ಪರಿವರ್ತಿಸಿದ್ದ. ಆರೋಪಿಗಳು ಸಂತ್ರಸ್ತರು ಮಾತನಾಡದಂತೆ ಅಥವಾ ಸಂಸ್ಥೆಯಿಂದ ಹೊರಹೋಗದಂತೆ ತಡೆಯಲು ಅವರ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಹರಿದ್ವಾರದಲ್ಲಿ ಕಿರುಕುಳ ಹೊಸ ಐಷಾರಾಮಿ ಕಾರು ಖರೀದಿಸಿದ ನಂತರ, ಆರೋಪಿ ವಿಶೇಷ ಪೂಜೆಯ ನೆಪದಲ್ಲಿ ಹಲವಾರು ವಿದ್ಯಾರ್ಥಿನಿಯರನ್ನು ಹರಿದ್ವಾರಕ್ಕೆ ಕರೆದೊಯ್ದಿದ್ದರು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಹಿಂತಿರುಗುವಾಗ ಕಾರಿನಲ್ಲಿ ಚೈತನ್ಯಾನಂದರ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ನನ್ನನ್ನು ಮಗು ಎಂದು ಕರೆಯುತ್ತಿದ್ದರು ಚೈತನ್ಯಾನಂದ ವಾಟ್ಸಾಪ್‌ನಲ್ಲಿ ಸಂದೇಶಗಳನ್ನು ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದರು ಎಂದು 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಆರೋಪಿಗಳು ತಮ್ಮನ್ನು ಬೇಬಿ ಎಂದು ಕರೆಯುತ್ತಿದ್ದರು ಎಂದು ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ್ದಾರೆ. ಬೇಬಿ ನಾನು ನಿನ್ನನ್ನು ಪ್ರೀತಿಸುತ್ತೇನೆ, ನೀನು ತುಂಬಾ ಸುಂದರವಾಗಿದ್ದೀಯ ಎಂದು ಹೇಳುತ್ತಿದ್ದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.
ಭದ್ರತೆಯ ನೆಪದಲ್ಲಿ ಮಹಿಳಾ ಹಾಸ್ಟೆಲ್‌ನಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ವಿದೇಶ ಪ್ರವಾಸಗಳಿಗೆ ಚೈತನ್ಯಾನಂದ ಅವರೊಂದಿಗೆ ಹೋಗುವಂತೆ ಒತ್ತಡ ಹೇರಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
