Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಈಜುಕೊಳ ದುರಂತ: ಖಾಸಗಿ ರೆಸಾರ್ಟ್ ನಲ್ಲಿ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್, ವ್ಯಕ್ತಿ ಸಾವು

Spread the love

ಚಿಕ್ಕಮಗಳೂರು : ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಅಸುನೀಗಿರುವ ಘಟನೆ ನೆನ್ನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪಿನ ಮಾಲೀಕ ನಿಶಾಂತ್ ಎಂದು ತಿಳಿದಿದೆ. ಅವರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ ಟೂರ್ ಹೋಗಿದ್ದರು ,ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ. ನಿಶಾಂತ್, ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಸ್ನೇಹಿತನ ಜೊತೆ ತೆರಳಿದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು ಜೊತೆಯಲ್ಲಿದ್ದ ಗೆಳೆಯರಿಗೆ ದಿಗಿಲು ಬಡಿದಂತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *