ಖಾಸಗಿ ಹೋಟೆಲ್‌ನಲ್ಲಿ ಟಿ. ನರಸೀಪುರ RFO ಶವ ಪತ್ತೆ

ಮೈಸೂರು: ಮೈಸೂರು ಕೇಂದ್ರ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್ವೊಂದರಲ್ಲಿ ಆರ್ಎಫ್ಒ (RFO) ಮೃತದೇಹ ಪತ್ತೆಯಾಗಿದೆ. ಮೃತನನ್ನು ಟಿ ನರಸೀಪುರ ಆರ್ಎಫ್ಒ ಕಾಂತರಾಜ್ ಚೌಹಾಣ್ ಎಂದು ತಿಳಿದುಬಂದಿದೆ. ಸದ್ಯ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದೆ.


15 ದಿನದ ಹಿಂದೆಯಷ್ಟೇ ಕಾಂತರಾಜ್ ಚೌಹಾಣ್ ನರಸೀಪುರಕ್ಕೆ ವರ್ಗವಾಗಿದ್ದರು. ಇದೀಗ ಅನುಮಾನಾಸ್ಪದ ರೀತಿಯಲ್ಲಿ ಅವರ ಶವಪತ್ತೆಯಾಗಿದ್ದು ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪದ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ನಲ್ಲಿ ಕಾಂತರಾಜ್ ಚೌಹಾಣ್ ಶವ ಪತ್ತೆಯಾಗಿದೆ. ಇನ್ನು ಅವರ ಜೊತೆಗಿದ್ದ ಕಾಂತರಾಜ್ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿದ್ದಾರೆ.