Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಟಿ-20 ವಿಶ್ವಕಪ್: ದಕ್ಷಿಣ ಆಫ್ರಿಕಾವನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಇಂಗ್ಲೆಂಡ್!

Spread the love

ಲಂಡನ್: ನಾಯಕಿ ನ್ಯಾಟ್ ಸೀವರ್-ಬ್ರಂಟ್ (75 ರನ್, 47 ಎಸೆತ) ಹಾಗೂ ಹೀದರ್ ನೈಟ್ (58 ರನ್, 47 ಎಸೆತ, 6 ಬೌಂಡರಿ, 1 ಸಿಕ್ಸರ್) ಅವರ ಅರ್ಧಶತಕದ ನೆರವಿನಿಂದ ಆತಿಥೇಯ ಇಂಗ್ಲೆಂಡ್ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 40 ರನ್ಗಳ ಅಂತರದಿಂದ ಮಣಿಸಿ ಮಹಿಳೆಯರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಫೈನಲ್ಲೆ ಲಗ್ಗೆ ಇಟ್ಟಿದೆ.
ಇಂಗ್ಲೆಂಡ್ ತಂಡವು ರವಿವಾರ ಲಾರ್ಡ್ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ಶನಿವಾರ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಇಂಗ್ಲೆಂಡ್ ತಂಡವು ಕಳಪೆ ಆರಂಭದಿಂದ ಚೇತರಿಸಿಕೊಂಡು ನಿಗದಿತ 20 ಓವರ್ಗಳಲ್ಲಿ ಐದು ವಿಕೆಟ್ಗಳ ನಷ್ಟಕ್ಕೆ 169 ರನ್ ಗಳಿಸಿತು.

ಗೆಲ್ಲಲು 170 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ಗಳ ನಷ್ಟಕ್ಕೆ 129 ರನ್ ಗಳಿಸಲಷ್ಟೇ ಶಕ್ತವಾಯಿತು.ಆರಂಭಿಕ ಆಟಗಾರ್ತಿ ತಂಝಿಮ್ ಬ್ರಿಟ್ಸ್ (51 ರನ್, 45 ಎಸೆತ, 6 ಬೌಂಡರಿ) ಏಕಾಂಗಿ ಹೋರಾಟ ನೀಡಿದರು. ಉಳಿದವರು ಬ್ಯಾಟಿಂಗ್ನಲ್ಲಿ ವೈಫಲ್ಯ ಕಂಡರು.ಇಂಗ್ಲೆಂಡ್ ತಂಡದ ಪರವಾಗಿ ಲೌರೆನ್ ಬೆಲ್ (2-28) ಹಾಗೂ ಚಾರ್ಲಿ ಡೀನ್ (2-31) ತಲಾ ಎರಡು ವಿಕೆಟ್ಗಳನ್ನು ಪಡೆದರು.ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡವು 3.2 ಓವರ್ ಗಳಲ್ಲಿ 23 ರT20 ಮೂರು ವಿಕೆಟ್ಗಳನ್ನು ಕಳೆದುಕೊಂಡಿತು. ಆಗ ಜೊತೆಯಾದ ಸೀವರ್-ಬ್ರಂಟ್ ಹಾಗೂ ಹೀದರ್ ನೈಟ್ ನಾಲ್ಕನೇ ವಿಕೆಟ್ಟೆ 133 ರನ್ ಸೇರಿಸಿ ತಂಡವನ್ನು ಆಧರಿಸಿದರು. ಆದರೆ, ಬ್ರಂಟ್ ಹಾಗೂ ನೈಟ್ ಬೆನ್ನುಬೆನ್ನಿಗೆ ಔಟಾದರು.


Spread the love
Share:

administrator

Leave a Reply

Your email address will not be published. Required fields are marked *