Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

16ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ; ಸ್ಕಿಜೋಫ್ರೇನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಯುವಕ

Spread the love

ಬೆಂಗಳೂರು: ಅಪಾರ್ಟ್‌ಮೆಂಟ್‌ನ (Apartment) 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ನಿಕ್ಷೇಪ್ (26) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದು, ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ಬಂದು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *