Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತೆಲಂಗಾಣ: ಸಂಗರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತ; ಕರ್ನಾಟಕ ಮೂಲದ ಕಾರ್ಮಿಕರು ಸೇರಿದಂತೆ 9 ಮಂದಿ ಸಾ*ವು!

Spread the love

ತೆಲಂಗಾಣ : ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-65 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಒಂಬತ್ತು ಮಂದಿ ದುರ್ಮರಣಕ್ಕೀಡಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದು ಅಪಘಾತದಲ್ಲಿ ಮೃತರಲ್ಲಿ ಕರ್ನಾಟಕ ಮೂಲದ ದಿನಗೂಲಿ ಕಾರ್ಮಿಕರು ಸೇರಿದ್ದಾರೆ.

ಮೊದಲ ಹಾಗೂ ಅತಿ ಭೀಕರ ಅಪಘಾತವು ಮೊಗುಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಬಳಿ ಸಂಭವಿಸಿದೆ. ಕರ್ನಾಟಕದ ಬೀದರ್ ಜಿಲ್ಲೆಯ ರಾಜಗಿರಿ ಗ್ರಾಮದಿಂದ ತೆಲಂಗಾಣದ ಜಹೀರಾಬಾದ್‌ಗೆ ಕೆಲಸಕ್ಕಾಗಿ ತೆರಳಿ ಸಂಜೆ ಮನೆಗೆ ಮರಳುತ್ತಿದ್ದ 12 ದಿನಗೂಲಿ ಕಾರ್ಮಿಕರಿದ್ದ ಆಟೋರಿಕ್ಷಾಗೆ, ಯು-ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಟ್ರಕ್ ಡಿಕ್ಕಿ ಹೊಡೆದಿದೆ.

ಈ ಭೀಕರ ಅಪಘಾತದಲ್ಲಿ ಆರು ಮಹಿಳೆಯರು ಹಾಗೂ ಆಟೋ ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರೇಖಾ, ಶ್ರೀದೇವಿ, ಕವಿತಾ, ರೇಷ್ಮಾ ಹಾಗೂ ಆಟೋ ಚಾಲಕ ದೇವದಾಸ್ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ಪ್ರತಿದಿನ ಕೆಲಸ ಹುಡುಕಿಕೊಂಡು ಜಹೀರಾಬಾದ್‌ಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇತರ ಪ್ರಯಾಣಿಕರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಗಾರೆಡ್ಡಿ ಜಿಲ್ಲೆಯಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ಮೂರು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೊಹಿರ್ ಮಂಡಲದ ಕವೇಲಿಯಲ್ಲಿ ಈ ಅಪಘಾತ ಸಂಭವಿಸಿದೆ. ಇದರೊಂದಿಗೆ, ಸಂಗರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *