ಶೃಂಗೇರಿ: ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್ – ಕರ್ತವ್ಯ ಲೋಪ ಆರೋಪದಲ್ಲಿ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್!

ಶೃಂಗೇರಿ:ಕರ್ತವ್ಯ ಲೋಪ ಹಿನ್ನಲೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನ್ನು ಸಸ್ಪೆಂಡ್ ಮಾಡಲಾಗಿದೆ. ಜಕ್ಕಣ್ಣ ಸಸ್ಪೆಂಡ್ ಆದ ಶೃಂಗೇರಿ ಪಿಎಸ್ಐ.

ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ಮೇಲೆ ದಾಳಿ, ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಹಿನ್ನಲೆ ಅಮಾನತು ಮಾಡಲಾಗಿದೆ.
ಶೃಂಗೇರಿ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಮರಳು ದಂಧೆ ಕುರಿತು ನ್ಯೂಸ್ ಮಲ್ನಾಡ್ ನಿರಂತರ ವರದಿ ಪ್ರಕಟಿಸಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡು ಶೃಂಗೇರಿ ತಾಲ್ಲೂಕು ಆಡಳಿತ ಹಾಗೂ ಚಿಕ್ಕಮಗಳೂರು ಪೊಲೀಸ್ ಇಲಾಖೆ ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಹಾಗೆಯೇ ಶೃಂಗೇರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ನೈತಿಕ ಪೊಲೀಸ್ ಗಿರಿ ಜೊತೆಗೆ ಶೃಂಗೇರಿಯ ಮೀಗಾ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಚಿಕ್ಕಮಗಳೂರು ಸೆನ್ ಪೊಲೀಸ್ ದಾಳಿ, ಈ ಎಲ್ಲಾ ಪ್ರಕರಣದಲ್ಲೂ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಕ್ಕಣ್ಣ ನನ್ನು ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.