Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಧ್ಯಪ್ರಾಚ್ಯದಲ್ಲಿ ತಲ್ಲಣ: ಕುವೈತ್ ಮತ್ತು ಅಬುಧಾಬಿಯಲ್ಲಿ ಕೇಳಿಬಂದ ಭೀಕರ ಸ್ಫೋಟದ ಸದ್ದು

Spread the love

ಬಕ್ರೇನ್ : ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಬೆನ್ನಲ್ಲೆ ಬಗ್ರೇನ್, ಕುವೈತ್, ಅಬುಧಾಬಿಯಲ್ಲಿ ಸ್ಫೋಟಗಳು ಸಂಭವಿರುವ ಬಗ್ಗೆ Aljazeera ವರದಿ ಮಾಡಿದೆ.
ಬಕ್ರೇನ್‌ನ ಆಂತರಿಕ ಸಚಿವಾಲಯ ತುರ್ತು ಎಚ್ಚರಿಕೆಯನ್ನು ನೀಡಿದೆ. ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆಯನ್ನು ನೀಡಿದೆ.
ಬಕ್ರೇನ್‌ನ ಜುಫೈರ್ ಪ್ರದೇಶದಲ್ಲಿರುವ ಯುಎಸ್ ನೌಕಾಪಡೆ ನೆಲೆಯಿಂದ ಹೊಗೆ ಕಾಣಿಸಿಕೊಂಡಿದೆ ಎಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಯುಎಸ್ ನೌಕಾಪಡೆಯ 5ನೇ ಪ್ರಧಾನ ಕಚೇರಿಯನ್ನು ಕ್ಷಿಪಣಿ ದಾಳಿಗೆ ಗುರಿಪಡಿಸಲಾಗಿದೆ ಎಂದು ಬಕ್ರೇನ್ ದೃಢಪಡಿಸಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕುವೈತ್‌ನಲ್ಲಿ ಸ್ಫೋಟಗಳ ಸದ್ದು ಕೇಳಿಬಂದಿದೆ. ಸೈರನ್‌ಗಳು ಸಕ್ರಿಯಗೊಂಡಿವೆ ಎಂದು ವರದಿಯು ತಿಳಿಸಿದೆ.
ಖತರ್‌ನ ರಾಜಧಾನಿ ದೋಹಾದಲ್ಲಿ ಸ್ಫೋಟಗಳ ಶಬ್ದ ಕೇಳಿಬಂದಿದೆ. ಖತರ್‌ನ ರಕ್ಷಣಾ ಸಚಿವಾಲಯವು, ದೇಶವನ್ನು ಗುರಿಯಾಗಿಸಿಕೊಂಡು ಹಾರಿಸಿದ ಕ್ಷಿಪಣಿಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿದೆ.


Spread the love
Share:

administrator

Leave a Reply

Your email address will not be published. Required fields are marked *