ವಿಟ್ಲದಲ್ಲಿ ಕಳ್ಳತನ: ಅರ್ಚಕನ ಮನೆಯಿಂದ ಚಿನ್ನಾಭರಣ ದೋಚಿ ಕಳ್ಳರು ಪರಾರಿ

ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.

ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ರಜತ್ ಭಟ್ ಅವರು ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.