ʼಅಪರಾಧಿ ಅಂತಾರೆ, ಆದರೆ ಸತ್ಯ ಯಾರಿಗೂ ಗೊತ್ತಿಲ್ಲʼ – ಕೋರ್ಟಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರು

ಬೆಂಗಳೂರು: ಹಾಸನ ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ, ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ರಿದ್ರಾ? ಕಳೆದ 6 ತಿಂಗಳಿಂದ ಅಪ್ಪ-ಅಮ್ಮನ ಮುಖವನ್ನೇ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಧೀರ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ.. ಕೋರ್ಟ್ ಕಟಕಟೆಯಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣ ಆಡಿದ ಮಾತುಗಳಿವು.

ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದ ಪೂರ್ಣಗೊಂಡಿದ್ದು, ಮಧ್ಯಾಹ್ನ 2:45ಕ್ಕೆ ನ್ಯಾ. ಗಜಾನನ ಭಟ್ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ.
ಇನ್ನೂ ವಾದ-ಪ್ರತಿವಾದದ ಬಳಿಕ ನಿಮ್ಮದೇನಾದ್ರೂ ಹೇಳೋದು ಇದ್ಯಾ? ಅಂತ ನ್ಯಾಯಪೀಠ ಪ್ರಜ್ವಲ್‌ರನ್ನ ಕೇಳಿತು. ಈ ವೇಳೆ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ, ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ರಿಲೀಸ್ ಮಾಡಿದ್ದಾರೆ. ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ತಾ ಇದ್ರಾ? ಅಂತ ಕಣ್ಣೀರಿಟ್ಟರು
ನಂಗೆ ಕುಟುಂಬ ಇದೆ, 6 ತಿಂಗಳಿಂದ ಅಪ್ಪ-ಅಮ್ಮನನ್ನ ಸರಿಯಾಗಿ ನೋಡಿಲ್ಲ. ಪ್ರತಿಬಾರಿಯೂ ಕೋರ್ಟ್‌ಗೆ ಬರ್ತಾ ಇದ್ದೀನಿ. ನನ್ನ ಕುಟುಂಬ ನನ್ನಿಂದ ಸಂಪೂರ್ಣ ದೂರವಾಗಿದೆ. ನಾನು ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು. ಎಸ್‌ಐಟಿ ನಂಬರ್ ನೀಡಿದ್ದರೂ ಯಾರು ದೂರು ನೀಡಲಿಲ್ಲ. ನಾನು ಕಾಲೇಜಿನಲ್ಲಿ ಮೆರಿಟ್ ವಿದ್ಯಾರ್ಥಿ ಆಗಿದ್ದೆ. ನನ್ನನ್ನ ದುರುದ್ದೇಶದಿಂದ ಸಿಲುಕಿಸಿದ್ರು ಅಂತ ಗಳಗಳನೆ ಅತ್ತಿದ್ದಾರೆ
