Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪೊಲೀಸ್ ಠಾಣೆಯಲ್ಲೇ ಮೊಬೈಲ್ ಕದ್ದ ಖದೀಮ- ಸಿಸಿಟಿವಿಯಲ್ಲಿ ಸೆರೆಯಾದ ಕೈಚಳಕ

Spread the love

ಗದಗ: ಸರಗಳ್ಳತನ ಮಾಡುವವರು, ಮೊಬೈಲ್ ಕಳ್ಳತನ ಮಾಡುವವರಿಗೆ ಪೊಲೀಸರನ್ನು ಕಂಡರೆ ಭಯ ಇದ್ದೇ ಇರುತ್ತದೆ. ಆದರೆ, ಇಲ್ಲೊಬ್ಬ ಆಸಾಮಿ ಪೊಲೀಸ್ ಠಾಣೆಯಲ್ಲಿಯೇ ಪೊಲೀಸರ ಎದುರೇ ಅವರದ್ದೇ ಮೊಬೈಲ್ ಕದ್ದಿದ್ದಾನೆ. ಈ ಖದೀಮನ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೌದು, ಗದಗ ಶಹರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮುಲ್ಲಾ ಎನ್ನುವ ವ್ಯಕ್ತಿಯೇ ಈ ಕಳ್ಳತನ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಮಹಿಳಾ ಸಿಬ್ಬಂದಿಯೊಬ್ಬರ ಜೊತೆ ಮಾತನಾಡುತ್ತಿದ್ದ ವೇಳೆ ಅವರ ಮೊಬೈಲ್ ಕದ್ದಿದ್ದಾನೆ. ಈ ಘಟನೆ ಸ್ಟೇಷನ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹೋಟೆಲ್ ಒಂದರಲ್ಲಿ ನಡೆದಿದ್ದ ಗಲಾಟೆ ವಿಷಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಈ ಮುಲ್ಲಾ ಪೊಲೀಸ್ ಸ್ಟೇಷನ್ ಗೆ ಬಂದಿದ್ದನು. ಬಿಲ್ ಕೊಡದ ಗಲಾಟೆ ಮಾಡಿದ್ದ ವ್ಯಕ್ತಿಯ ಪರವಾಗಿ ಸ್ಟೇಷನ್ ಗೆ ಬಂದಿದ್ದ ಎಂದು ಹೇಳಲಾಗಿದೆ. ಒಳಗೆ ವಿಚಾರಣೆ ನಡೆಯುತ್ತಿದ್ದಾಗ ಆಚೆ ನಿಂತು ಮೊಬೈಲ್ ಕದ್ದಿದ್ದಾನೆ. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *