Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಿಕ್ಕಿ ಕೇಜ್ ಮನೆಯ ಮುಚ್ಚಳ ಕದ್ದ ಕಳ್ಳ ಅರೆಸ್ಟ್: 700 ರೂಪಾಯಿಗೆ ಗುಜರಿ ಅಂಗಡಿ ಪಾಲಾಗಿತ್ತು ಗ್ರ್ಯಾಮಿ ವಿಜೇತನ ಸಂಪ್ ಮುಚ್ಚಳ!

Spread the love

ಬೆಂಗಳೂರು: ಸಂಗೀತ ನಿರ್ದೇಶಕ ರಿಕ್ಕಿ ಕೇಜ್ (Ricky Kej) ಮನೆಯಲ್ಲಿ ಸಂಪ್ ಮುಚ್ಚಳ ಕದ್ದಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಕದ್ದಿದ್ದ ಸಂಪ್‌ನ ಮುಚ್ಚಳವನ್ನು 700 ರೂ.ಗೆ ಗುಜರಿ ಅಂಗಡಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ

ಈ ಕುರಿತು ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರು ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡು, ಕಳ್ಳತನದ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಜೊತೆಗೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ. ಕಳ್ಳತನದಲ್ಲಿ ಬಾಗಿಯಾಗಿದ್ದ ಇನ್ನೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *