Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಓವರ್ ಟೇಕ್ ಯತ್ನದಲ್ಲಿ ಮೂವರು ಬಾಲಕರಿಗೆ ಭೀಕರ ಅಪಘಾತ

Spread the love

ಬಾಗಲಕೋಟೆ: ಓವರ್ ಟೇಕ್​ ಮಾಡಲು ಹೋಗಿ ಕ್ಯಾಂಟರ್​ ಅಡಿ ಬಿದ್ದು ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಬಾಲಕರು  ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್​ನಲ್ಲಿ ನಡೆದಿದೆ. ಮುರನಾಳ ಗ್ರಾಮದ‌ ನಿವಾಸಿಗಳಾದ ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16) ಮತ್ತು ಕಾಮಣ್ಣ ಕುಪಲಿ (16) ಮೃತ ಬಾಲಕರು. ಘಟನಾ ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಊರಲ್ಲಿ ಹನುಮ ಜಯಂತಿ ಹಿನ್ನೆಲೆ ಡಿಜೆ ಮೆರವಣಿಗೆ ಆಯೋಜಿಸಲಾಗಿತ್ತು. ಹೀಗಾಗಿ ಡಿಜೆ ಮೆರವಣಿಗೆ ನೋಡಲು ಮೂವರು ಬಾಲಕರು ಬೈಕ್​ನಲ್ಲಿ ತೆರಳಿದ್ದರು. ಗದ್ದನಕೇರಿ ಕ್ರಾಸ್​ನಿಂದ ಹುಬ್ಬಳ್ಳಿ ಮಾರ್ಗವಾಗಿ  ತೆರಳುತ್ತಿದ್ದ ಬೈಕ್​ಗೆ ​​ಕ್ಯಾಂಟರ್ ಡಿಕ್ಕಿಯಾಗಿದೆ. ಸ್ಥಳದಲ್ಲೇ ಮೂವರು ಬಾಲಕರು ಸಾವನ್ನಪ್ಪಿದ್ದಾರೆ.

ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಎಡಗಡೆಯಿಂದ ಓವರ್ ಟೇಕ್ ಮಾಡಲು ಹೋಗಿ ಬಾಲಕರ ಯಡವಟ್ಟು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಐವರು ಯುವಕರು ಹೊರಟಿದ್ದರು. ಅವರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ ಆಗಿದ್ದು, ನೇರವಾಗಿ ಕ್ಯಾಂಟರ್​​ ಅಡಿಗೆ ಸಿಲುಕಿದ್ದಾರೆ.

ಗದ್ದನಕೇರಿ ಕ್ರಾಸ್​ನಿಂದ ಹುಬ್ಬಳ್ಳಿ ‌ಮಾರ್ಗವಾಗಿ ಕ್ಯಾಂಟರ್​ ಚಾಲಕ ಸರಿಯಾಗಿ ತನ್ನ ಮಾರ್ಗದಲ್ಲಿ ಹೊರಟಿದ್ದ. ಬಾಲಕರ ಎಡವಟ್ಟಿನಿಂದ ಅವಘಡ ಸಂಭವಿಸಿದೆ. ಇನ್ನು ಬಾಲಕರು ಹೆಲ್ಮೆಟ್ ಧರಿಸಿರಲಿಲ್ಲ ಮತ್ತು ತ್ರಿಬಲ್ ರೈಡಿಂಗ್ ಹೊರಟ್ಟಿದ್ದರು. ಎಡಗಡೆ ಓವರ್ ಟೇಕ್ ಕಾರಣದಿಂದ ಜೀವ ಕಳೆದುಕೊಂಡಿದ್ದಾರೆ.

ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಸಾವು

ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ತಾಲೂಕಿನ ಶಕ್ತಿನಗರ ಬಳಿಯಿರುವ ಆರ್​​ಟಿಪಿಎಸ್​​ ವಿದ್ಯುತ್ ಉತ್ಪಾದನಾ ಘಟಕದಲ್ಲಿ ನಡೆದಿದೆ. ವಾಟರ್ ಕ್ಲಾರಿಫೈರ್ ಕ್ಲೀನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಘಟನೆ ಸಂಭವಿಸಿದೆ. ಕಾರ್ಮಿಕ ತಿಮ್ಮಾರೆಡ್ಡಿ(28) ಮೃತಪಟ್ಟಿದ್ದು, ಇನ್ನುಳಿದ ಮೂವರಿಗೆ ಗಾಯಗಳಾಗಿವೆ.

ಗೊಂಡಿರುವ ರಂಗಪ್ಪ, ಹನುಮೇಶ್, ವಿರೇಶ್​ಗೆ ಆರ್​ಟಿಪಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. RTPS ಅಧಿಕಾರಿಗಳು ಯಾವುದೇ ಸುರಕ್ಷತೆ ನೀಡದೇ ಕೆಲಸಕ್ಕೆ ಹಚ್ಚಿದ್ದಾರೆ ಎನ್ನಲಾಗುತ್ತಿದೆ. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೃತ ಕಾರ್ಮಿಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ರಾಯಚೂರು ತಾಲೂಕಿನ ಶಕ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *