Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಈದ್  ಆಹ್ವಾನ ನೆಪದಲ್ಲಿ ಮೂವರು ಬಾಲಕಿಯರ ಮೇಲೆ ಅತ್ಯಾಚಾರ: ಗೋವದಲ್ಲಿ ಮೂವರು ಬಂಧನ

Spread the love

ಗೋವಾ: ಈದ್ ಆಚರಣೆಯ ನೆಪದಲ್ಲಿ ಮೂವರು ಬಾಲಕಿಯರನ್ನು ಹೋಟೆಲ್ ರೂಂಗೆ ಆಹ್ವಾನಿಸಿ ಸ್ನೇಹಿತರೇ ಅತ್ಯಾಚಾರವೆಸಗಿದ ಘಟನೆ ಉತ್ತರ ಗೋವಾದಲ್ಲಿ ಜೂನ್ 8 ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಹಾಗೂ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹುಡುಗಿಯರ ಪೋಷಕರು ಪೊಲೀಸರ ಬಳಿ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು ಎಂದು ತಿಳಿದುಬಂದಿದೆ.ಹುಡುಗಿಯರು ಆರೋಪಿಗಳ ಸ್ನೇಹಿತರಾಗಿದ್ದರು, ಅವರನ್ನು ಈದ್ ಆಚರಣೆಗೆಂದು ಆಹ್ವಾನಿಸಿದ್ದರಿಂದ ಇವರು ಹೋಗಿದ್ದರು. ಈ ವೇಳೆ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಅವರನ್ನು ಹುಡುಕಲು ಹಲವಾರು ತಂಡಗಳನ್ನು ರಚಿಸಿದ ನಂತರ ಅದೇ ದಿನ ಕ್ಯಾಲಂಗುಟ್ ಬೀಚ್‌ನಲ್ಲಿರುವ ಹೋಟೆಲ್‌ನಿಂದ ಅವರನ್ನು ರಕ್ಷಿಸಲಾಯಿತು. ಪೊಲೀಸರು 19 ಮತ್ತು 21 ವರ್ಷದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಈ ಬಗ್ಗೆ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಹೋಟೆಲ್ ಮಾಲೀಕನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಗೋವಾ ಮಕ್ಕಳ ಕಾಯ್ದೆಯಡಿಯಲ್ಲಿ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿರುತ್ತದೆ.


Spread the love
Share:

administrator

Leave a Reply

Your email address will not be published. Required fields are marked *