Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತಿರುಮಲ: ಇತಿಹಾಸ ನಿರ್ಮಿಸಿದ ಶ್ರೀವಾರಿ ಲಡ್ಡು; ಒಂದೇ ತಿಂಗಳಲ್ಲಿ ದಾಖಲೆಯ 1.21 ಕೋಟಿ ಪ್ರಸಾದ ಮಾರಾಟ!

Spread the love

ಚಾಮರಾಜನಗರ : ಕಾರು ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿಯಾಗಿ ಮಗು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್‌ನಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಬೆಂಗಳೂರು ಮೂಲದ ಮುಬಾರಕ್ (70) ಹಾಗೂ 7 ತಿಂಗಳ ಗಂಡು ಮಗು ಮೃತಪಟ್ಟವರು. ತಮಿಳುನಾಡು ಕಡೆಗೆ ತೆರಳುತ್ತಿದ್ದ ಬೊಲೆರೋ ಪಿಕಪ್ ಹಾಗೂ ತಮಿಳುನಾಡಿನಿಂದ ಬೆಂಗಳೂರಿನತ್ತ ಹೊರಟಿದ್ದ ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಢಿಕ್ಕಿ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮಕ್ಕಳು ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮೂಲಕ ಚಾಮರಾಜನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *