Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಣೆಗೆ ರೈಲ್ವೆ ಕ್ರಮ: ಬೆಂಗಳೂರು (ಯಶವಂತಪುರ) ಮತ್ತು ದಾನಾಪುರ ನಡುವೆ 12 ಟ್ರಿಪ್‌ಗಳ ವಿಶೇಷ ರೈಲು

Spread the love

ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.

ಬೆಂಗಳೂರು: ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.

ದಾನಾಪುರ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು (03261) ಅಕ್ಟೋಬರ್ 11 ರಿಂದ ಡಿಸೆಂಬರ್ 27, 2025 ರವರೆಗೆ ಪ್ರತಿ ಶನಿವಾರ ಬೆಳಗ್ಗೆ 10 ಗಂಟೆಗೆ ದಾನಾಪುರದಿಂದ ಹೊರಡುತ್ತದೆ ಮತ್ತು ಮಂಗಳವಾರ ರಾತ್ರಿ 9.30 ಗಂಟೆಗೆ ಯಶವಂತಪುರ ತಲುಪುತ್ತದೆ.

ಮರಳಿ ಬರುವಾಗ, ಈ ರೈಲು (03262) ಅಕ್ಟೋಬರ್ 14 ರಿಂದ ಡಿಸೆಂಬರ್ 30 ರವರೆಗೆ ಪ್ರತಿ ಮಂಗಳವಾರ ಬೆಳಗ್ಗೆ 7 ಗಂಟೆಗೆ ಯಶವಂತಪುರದಿಂದ ಹೊರಡುತ್ತದೆ ಮತ್ತು ಗುರುವಾರ ಮಧ್ಯಾಹ್ನ 12 ಗಂಟೆಗೆ ದಾನಾಪುರ ತಲುಪುತ್ತದೆ. ಈ ರೈಲು ಪ್ರತಿ ದಿಕ್ಕಿನಲ್ಲಿಯೂ ಒಟ್ಟು ಹನ್ನೆರಡು ಟ್ರಿಪ್‌ಗಳು ಇರಲಿವೆ ಎಂದು ಪ್ರಕಟಣೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *