ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಮಧ್ಯಾಹ್ನ 3 ಗಂಟೆಗೆ ರಿಸಲ್ಟ್ ಲಭ್ಯ; ಡಿಜಿಲಾಕರ್‌ನಲ್ಲಿ ಮೊದಲ ಬಾರಿಗೆ ಅಂಕಪಟ್ಟಿ ಲಭ್ಯ

ಬೆಂಗಳೂರು : ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಎ.9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ.
ಗುರುವಾರ ಮಧ್ಯಾಹ್ನ 3.00 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದ್ದು ಸದರಿ ಫಲಿತಾಂಶವನ್ನು:https://karresults.nic.in Karnataka One Mobile App ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ನಾಳೆ ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿಯ ಪ್ರಕಟನೆ ತಿಳಿಸಿದೆ.
ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ.
