Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪೊಲೀಸರ ಸೋಗಿನಲ್ಲಿ 1.15 ಕೋಟಿ ರೂ. ದೋಚಿದ್ದ ಟ್ರಾಫಿಕ್ ಪೇದೆ ಬಂಧನ, ಅಮಾನತು

Spread the love

ಮಂಗಳೂರು: ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸುತ್ತಿದ್ದ 1.15ಕೋಟಿ ರೂ. ಹಣ ದರೋಡೆ ನಡೆಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಕಾರವಾರ ಟ್ರಾಫಿಕ್ ಪೊಲೀಸ್‌ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಕಾಪು ನಿವಾಸಿ ಅಝೀಝ್, ಹಳಿಯಾಳದ ನಸ್ರುಲ್ಲಾಖಾನ್, ಕಾರವಾರದ ನಿತ್ಯಾನಂದ, ಖಾಲಿದ್ ಎಂಬವರನ್ನು ಬಂಧಿಸಲಾಗಿತ್ತು. ಪ್ರಧಾನ ಆರೋಪಿ ಗಣೇಶ ಕೋಳಂಕರ್ ಬಂಧನ ಬಾಕಿಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸತ್ಯನಾರಾಯಣ ಎಂಬವರು ದಾವಣಗೆರೆಯಿಂದ ಮಂಗಳೂರಿಗೆ 1.15 ಕೋಟಿ ರೂ. ಹಣವನ್ನು ಬಸ್ಸಿನಲ್ಲಿ ತರುತ್ತಿದ್ದ ಬಗ್ಗೆ ಮಾಹಿತಿ ಪಡೆದ ಆರೋಪಿ ಶ್ರೀಶೈಲ್ ಯುವಕರ ತಂಡವನ್ನು ಕಟ್ಟಿಕೊಂಡು ಪೊಲೀಸರ ಸೋಗಿನಲ್ಲಿ ತೆರಳಿ ಹಣವನ್ನು ದೋಚಿದ್ದ. ಈ ಬಗ್ಗೆ ಸತ್ಯನಾರಾಯಣ ಅವರು ದೂರು ನೀಡಿದ್ದು, ಪ್ರಕರಣ ದಾಖಲಿಸಿದ್ದ ಉರ್ವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಗಣೇಶ ಕೊಳಂಕರ್ ಎಂಬ ಯುವಕನನ್ನು ಪೊಲೀಸ್ ಪೇದೆ ಬಳಸಿಕೊಂಡಿರುವುದು ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಪ್ರಧಾನ ಆರೋಪಿಗೆ ಮಂಗಳೂರು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಅಮಾನತು : ಹಣ ದರೋಡೆ ಮತ್ತು ಅಪಹರಣ ಪ್ರಕರಣದ ಆರೋಪಿ, ಕಾನ್ಸಬಲ್ ಶ್ರೀಶೈಲ್ ಬಂಧನವಾದ ಕಾರಣ ಆತನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *