ಅಯ್ಯಪ್ಪನ ದರ್ಶನದ ಯಾತ್ರೆಯಲ್ಲಿ ದುರಂತ:ಮಿನಿ ಬಸ್ ಪಲ್ಟಿ ಓರ್ವ ಮೃತ್ಯು, 10 ಮಂದಿಗೆ ಗಂಭೀರ ಗಾಯ

ಕೇರಳ : ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಕಾರಣ ಬಸ್ ನಲ್ಲಿ ಓರ್ವರು ಸಾವನಪ್ಪಿ 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಎರಿಮಲೈನಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ಪಟ್ಟಣದ ನಿವಾಸಿ ಮಾರುತಿ ಎಂ ಹರಿಹರ(51) ಮೃತ ಗುರುಸ್ವಾಮಿ. ಹಿರೇಕಣಗಿ ಸೇರಿ ಹಾನಗಲ್ ತಾಲೂಕಿನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಿನಿ ಬಸ್ ಮಾಡಿಕೊಂಡು ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದೆ. ಪರಿಣಾಮ ಓರ್ವ ಗುರುಸ್ವಾಮಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 20 ಜನರು ಪ್ರಾಣಪಾಯದಿಂದ ಪಾರಾಗಿದ್ದಾರೆ. ರಸ್ತೆಯ ಬದಿಯಲ್ಲಿ ಮರಗಳು ಇದ್ದ ಕಾರಣ ಮಿನಿಬಸ್ ಪ್ರಪಾತಕ್ಕೆ ಬೀಳುವ ಅಪಾಯದಿಂದ ಪಾರಾಗಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ. ರಾಜ್ಯ ಸರ್ಕಾರವು ಕೇರಳ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದೆ. ಅಲ್ಲದೇ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ, ಮೃತದೇಹವನ್ನು ತರುವ ವ್ಯವಸ್ಥೆ ಮಾಡಿದ್ದಾರೆ.

