ಬೀದರ್: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹ*ತ್ಯೆ

ಬೀದರ್ : ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ನಿವಾಸಿ ಅನಿಷ್ಕಾರ್ ಚೌಹಾಣ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.
ಎಂಬಿಬಿಎಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅನಿಷ್ಕಾರ್, ಆನ್‌ಲೈನ್ ಗೇಮ್‌ನಲ್ಲಿ ಸುಮಾರು 80 ಸಾವಿರ ರೂ. ಕಳೆದುಕೊಂಡಿದ್ದನು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
