Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯಮುನಾ ನದಿಯಲ್ಲಿ ಭಕ್ತರಿದ್ದ ಬೋಟ್ ಮಗುಚಿ ಭೀಕರ ದುರಂತ; 10 ಮಂದಿ ಸಾವು, ಹಲವರು ನಾಪತ್ತೆ!

Spread the love

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ (Yamuna River) ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ಪರಿಣಾಮವಾಗಿ 10 ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪಂಜಾಬ್‌ನ ಲುಧಿಯಾನದ ಸುಮಾರು 25 ಭಕ್ತರು ಪ್ರಯಾಣಿಸುತ್ತಿದ್ದ ಬೋಟ್ ಮಗುಚಿ ಬಿದ್ದಿದೆ. ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಲು ಈ ಭಕ್ತರು ಗಂಗಾ ನದಿಯ ಮೂಲಕ ಬೋಟ್​​ನಲ್ಲಿ ಸಾಗುತ್ತಿದ್ದರು.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮಥುರಾ ಜಿಲ್ಲೆಯಲ್ಲಿ ನಡೆದ ದೋಣಿ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುರಂತ ಮತ್ತು ಹೃದಯ ವಿದ್ರಾವಕವಾಗಿದೆ ಎಂದು ಹೇಳಿದ್ದಾರೆ. “ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ತಲುಪಲು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸೂಚನೆಗಳನ್ನು ನೀಡಲಾಗಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಭಗವಾನ್ ಶ್ರೀ ರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *