Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಜೇಶ್ವರದಲ್ಲಿ ಭೀಕರ ಅಪಘಾತ – ಕಾರು ಸೇತುವೆ ಕಂಬಕ್ಕೆ ಡಿಕ್ಕಿ, ತಂದೆ-ಮಗ ಸಹಿತ ಮೂವರು ಸಾವು

Spread the love

ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಎಂದು ಗುರುತಿಸಲಾಗಿದೆ. ರತ್ನಂ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿಗೆ ತೆರಳಬೇಕಿದ್ದ ಕಿಶನ್‌ರನ್ನು ಪೈವಳಿಕೆ ಬಾಯಿಕಟ್ಟೆಯಿಂದ ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ಹಳೆ ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *