Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಾರುಣ ಘಟನೆ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Spread the love

ಧಾರವಾಡ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ತಂದೆ ವಿಠ್ಠಲರಾವ್(85), ಪುತ್ರ ನಾರಾಯಣ ಶಿಂಧೆ(42) ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಮೃತ ದುರ್ವೈವಿಗಳು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೇ ಬಾವಿಗೆ ತೆರಳಿದ್ದು, ಚಪ್ಪಲಿಗಳನ್ನ ದಂಡದ ಮೇಲೆ ಬಿಟ್ಟಿದ್ದಾರೆ. ಬಳಿಕ ದಂಪತಿ ಮಕ್ಕಳ ಸಮೇತ ಬಾವಿಗೆ ಜಿಗಿದಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆ ಎಂದು ಶಂಕಿಸಲಾಗಿದೆ ಹೊರೆತು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಈ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯಲ್ಲಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಲಿದೆ.


Spread the love
Share:

administrator

Leave a Reply

Your email address will not be published. Required fields are marked *